Select Your Language

Notifications

webdunia
webdunia
webdunia
webdunia

ಕೊರೊನಾ ವೈರಸ್ ಭೀತಿಗೆ ಭಟ್ಕಳ ಸಂಪೂರ್ಣ ಬಂದ್

ಕೊರೊನಾ ವೈರಸ್ ಭೀತಿಗೆ ಭಟ್ಕಳ ಸಂಪೂರ್ಣ ಬಂದ್
ಕಾರವಾರ , ಸೋಮವಾರ, 23 ಮಾರ್ಚ್ 2020 (19:29 IST)
ವಿದೇಶಗಳಿಂದ ಹೆಚ್ಚಾಗಿ ಜನರು ಭಟ್ಕಳಕ್ಕೆ ವಾಪಸ್ ಆಗುತ್ತಿದ್ದಾರೆ. ಹೀಗಾಗಿ ಭಟ್ಕಳ್ ದಲ್ಲಿ ಸಂಪೂರ್ಣ ಬಂದ್ ಮಾಡಲಾಗಿದೆ.

ಕಾರವಾರದ ಭಟ್ಕಳ ತಾಲೂಕಿಗೆ ವಿದೇಶದಿಂದ ಬಂದಿರುವವರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಭಟ್ಕಳ ಉಪವಿಭಾಗದಲ್ಲಿ ಕಲಂ 144 ಜಾರಿಮಾಡಿ ಸಂಪರ್ಕವನ್ನ ಸಂಪೂರ್ಣ ಬಂದ್ ಮಾಡುವ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಹೇಳಿದ್ದಾರೆ.

ಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರವನ್ನು ಕೈಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ಅಥವಾ ಭಟ್ಕಳಕ್ಕೆ ಯಾವುದೇ ತೊಂದರೆ ಇರುವುದಿಲ್ಲಾ.  ಜನರು ಆತಂಕ ಪಡುವ ಸನ್ನಿವೇಶವಿಲ್ಲ. ಭಟ್ಕಳ ಭಾಗದಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾದದ್ದು. ವಿದೇಶದಿಂದ ಬಂದ ಯುವಕ ಭಟ್ಕಳ ಊರಿನವನಾಗಿದ್ದು, ಆ ಯುವಕನನ್ನು ಭಟ್ಕಳಕ್ಕೆ ಬರುವ ಮೊದಲೇ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಯಾರೂ ಭಯಪಡುವ ಅವಶ್ಯಕತೆಯಿಲ್ಲಾ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ.

ಇದುವರೆಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಕ್ಕೆ ಹೋಗಿಬಂದವರಿದ್ದಾರೆ ಆದ್ದರಿಂದ ಮುನ್ನೆಚ್ಚರಿಕಾ ದೃಷ್ಟಿಯಿಂದ ಪ್ರತಿನಿತ್ಯ ಎರಡು ಬಾರಿ ಅವರನ್ನ ತಪಾಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.Share this Story:

Follow Webdunia kannada

ಮುಂದಿನ ಸುದ್ದಿ

ಮೀನಿಗೂ ಸಂಚಕಾರ ತಂದಿಟ್ಟ ಕೊರೊನಾ