Webdunia - Bharat's app for daily news and videos

Install App

ಕೊರೊನಾ ವೈರಸ್ ಭೀತಿಗೆ ಭಟ್ಕಳ ಸಂಪೂರ್ಣ ಬಂದ್

Webdunia
ಸೋಮವಾರ, 23 ಮಾರ್ಚ್ 2020 (19:29 IST)
ವಿದೇಶಗಳಿಂದ ಹೆಚ್ಚಾಗಿ ಜನರು ಭಟ್ಕಳಕ್ಕೆ ವಾಪಸ್ ಆಗುತ್ತಿದ್ದಾರೆ. ಹೀಗಾಗಿ ಭಟ್ಕಳ್ ದಲ್ಲಿ ಸಂಪೂರ್ಣ ಬಂದ್ ಮಾಡಲಾಗಿದೆ.

ಕಾರವಾರದ ಭಟ್ಕಳ ತಾಲೂಕಿಗೆ ವಿದೇಶದಿಂದ ಬಂದಿರುವವರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಭಟ್ಕಳ ಉಪವಿಭಾಗದಲ್ಲಿ ಕಲಂ 144 ಜಾರಿಮಾಡಿ ಸಂಪರ್ಕವನ್ನ ಸಂಪೂರ್ಣ ಬಂದ್ ಮಾಡುವ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ಹರೀಶಕುಮಾರ್ ಹೇಳಿದ್ದಾರೆ.

ಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರವನ್ನು ಕೈಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ಅಥವಾ ಭಟ್ಕಳಕ್ಕೆ ಯಾವುದೇ ತೊಂದರೆ ಇರುವುದಿಲ್ಲಾ.  ಜನರು ಆತಂಕ ಪಡುವ ಸನ್ನಿವೇಶವಿಲ್ಲ. ಭಟ್ಕಳ ಭಾಗದಲ್ಲಿ ಒಂದು ಪ್ರಕರಣ ಪಾಸಿಟಿವ್ ಬಂದಿದೆ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾದದ್ದು. ವಿದೇಶದಿಂದ ಬಂದ ಯುವಕ ಭಟ್ಕಳ ಊರಿನವನಾಗಿದ್ದು, ಆ ಯುವಕನನ್ನು ಭಟ್ಕಳಕ್ಕೆ ಬರುವ ಮೊದಲೇ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದ ಯಾರೂ ಭಯಪಡುವ ಅವಶ್ಯಕತೆಯಿಲ್ಲಾ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟೀಕರಣ ನೀಡಿದ್ದಾರೆ.

ಇದುವರೆಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾವೊಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಕ್ಕೆ ಹೋಗಿಬಂದವರಿದ್ದಾರೆ ಆದ್ದರಿಂದ ಮುನ್ನೆಚ್ಚರಿಕಾ ದೃಷ್ಟಿಯಿಂದ ಪ್ರತಿನಿತ್ಯ ಎರಡು ಬಾರಿ ಅವರನ್ನ ತಪಾಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಾರಂತ್ಯಕ್ಕೆ ಹೇಗಿರಲಿದೆ ರಾಜ್ಯದಲ್ಲಿ ಹವಾಮಾನ

ಇವಿಎಂ ಬದಲು ಬ್ಯಾಲೆಟ್ ಪೇಪರ್: ರಾಹುಲ್ ಗಾಂಧಿ ಬೇಡಿಕೆ ಕರ್ನಾಟಕ ಈಡೇರಿಸಿತು ಎಂದ ರಣದೀಪ್

ಜಿಎಸ್ ಟಿ ಬಗ್ಗೆ ಒಂದು ದಿನದ ಬಳಿಕ ಪ್ರತಿಕ್ರಿಯೆ: ಇದು ಮೋದಿ ಅಲ್ಲ ರಾಹುಲ್ ಗಾಂಧಿ ಸಾಧನೆ ಎಂದ ಸಿದ್ದರಾಮಯ್ಯ

ಮೋದಿ ಜನಪ್ರಿಯತೆ ಸಹಿಸದೇ ಕಾಂಗ್ರೆಸ್ ಹೀಗೆಲ್ಲಾ ಮಾಡ್ತಿದೆ: ಪಿ ರಾಜೀವ್

ಭಾರತ, ರಷ್ಯಾಗೆ ಡೊನಾಲ್ಡ್ ಟ್ರಂಪ್ ಬ್ರೇಕಪ್ ಮೆಸೇಜ್: ಈವಯ್ಯನಿಗೆ ಏನಾಗಿದೆ ಅಂತಿದ್ದಾರೆ ಪಬ್ಲಿಕ್

ಮುಂದಿನ ಸುದ್ದಿ
Show comments