Publish Date: Fri, 14 Apr 2023 (10:22 IST)
Updated Date: Fri, 14 Apr 2023 (11:11 IST)
ಚಿತ್ರದುರ್ಗ : ಭೋವಿ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡದ ಹಿನ್ನೆಲೆ ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಮಠದ ಇಮ್ಮಡಿ ಸಿದ್ಧರಾಮೇಶ್ವರ ಶ್ರೀ ಅಸಮಾಧಾನ ಹೊರಹಾಕಿದ್ದಾರೆ.
ಚಿತ್ರದುರ್ಗದ ಭೋವಿ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅರವಿಂದ ಲಿಂಬಾವಳಿ ಮತ್ತು ಗೂಳಿಹಟ್ಟಿ ಶೇಖರ್ ಅವರನ್ನು ಕಡೆಗಣನೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅಖಂಡ ಶ್ರೀನಿವಾಸ್ ಅವರು ಹೆಚ್ಚಿನ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದರು. ಅವರನ್ನು ಸಹ ಕಡೆಗಣನೆ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈ ಹಿಂದೆ 8 ರಿಂದ 10 ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಿದ್ದರು. ಈ ಬಾರಿ ಎರಡೂ ರಾಷ್ಟ್ರೀಯ ಪಕ್ಷದ ವರಿಷ್ಠರಿಗೆ ಭೋವಿ ಸಮಾಜದ ಮುಖಂಡರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೆವು. ಆದರೆ ಈ ಬಾರಿ ಸಮುದಾಯವನ್ನು ಎರಡು ರಾಷ್ಟ್ರೀಯ ಪಕ್ಷಗಳು ಕಡೆಗಣಿಸಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.