Select Your Language

Notifications

webdunia
webdunia
webdunia
webdunia

ಬಂಡೀಪುರ ಅರಣ್ಯಕ್ಕೆ ಬೆಂಕಿ ಇಟ್ಟ ಭೂಪ ಅರೆಸ್ಟ್

webdunia
ಚಾಮರಾಜನಗರ , ಶುಕ್ರವಾರ, 1 ಮಾರ್ಚ್ 2019 (13:07 IST)
ಸಾವಿರಾರು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಲು ಕಾರಣ ಎನ್ನಲಾದ ಆರೋಪಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಡೀಪುರ ಅರಣ್ಯಕ್ಕೆ ಬೆಂಕಿಯಿಟ್ಟ ಪ್ರಕರಣಕ್ಕೆ ಸಂಬಂಧಿಸಿ  ಆರೋಪಿಯನ್ನು ಗೋಪಾಲಸ್ವಾಮಿ ಬೆಟ್ಟ ವಲಯದ ಆರ್​​ಎಫ್ಒ ಪುಟ್ಟಸ್ವಾಮಿ ಬಂಧಿಸಿದ್ದಾರೆ.

ಗುಂಡ್ಲುಪೇಟೆ ತಾಲ್ಲೂಕಿನ ಕಳ್ಳಿಪುರದ ಅರುಣ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ. ವಿಚಾರಣೆ ವೇಳೆ ಆರೋಪಿ  ಏನನ್ನು ಬಾಯ್ಬಿಡುತ್ತಿಲ್ಲ ಎಂದು ತಿಳಿದು ಬಂದಿದ್ದು, ಸದ್ಯ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ವೃತ್ತಿಯಲ್ಲಿ ಆರೋಪಿ ರೈತನಾಗಿದ್ದು, ಸಿಡಿಆರ್ ಮಾಹಿತಿಗಳನ್ನು ಕಲೆಹಾಕುವ ಮೂಲಕ ಮತ್ತಷ್ಟು ಕಾಣದ ಕೈಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಅಗತ್ಯ ಬಿದ್ದರೆ ಪೊಲೀಸ್ ಇಲಾಖೆ ಸಹಕಾರ ಪಡೆಯುವುದಾಗಿ ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.
Share this Story:

Follow Webdunia kannada

ಮುಂದಿನ ಸುದ್ದಿ

ಪೈಲಟ್ ಅಭಿನಂದನ್ ಬಿಡುಗಡೆಯನ್ನು ಪ್ರಶ್ನಿಸಿ ಕೋರ್ಟ್ ಮೇಟ್ಟಿಲೆರಿದ ಪಾಕ್ ಹೋರಾಟಗಾರರು