Webdunia - Bharat's app for daily news and videos

Install App

ಎಸ್ಕೇಪ್ ಆಗಲು ಯತ್ನಿಸಿದ ಚಿರತೆಯ ಬಾಲ ಹಿಡಿದು ಬಲೆಗೆ ಎಸೆದ ಭೂಪ

Sampriya
ಮಂಗಳವಾರ, 7 ಜನವರಿ 2025 (19:40 IST)
Photo Courtesy X
ತಿಪಟೂರು: ಸಾರ್ವಜನಿಕರ ಕೂಗಾಟದಿಂದ ಬಲೆಗೆ ಬಿದ್ದಿದ್ದ ಚಿರತೆ ತಪ್ಪಿಸಿಕೊಳ್ಳಲು ಹೀಓದಾಗ ಅಲ್ಲೇ ಇದ್ದ ಗಟ್ಟಿ ಗುಂಡಿಗೆಯ ಯುವಕನೊಬ್ಬ ಅದರ ಬಾಲದ ಮೂಲದ ಹಿಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ತಾಲ್ಲೂಕಿನ ಕಸಬಾ ಹೋಬಳಿ ರಂಗಾಪುರ ಚಿಕ್ಕಕೊಟ್ಟಿಗೇನಹಳ್ಳಿ ಬಳಿ ಸಾರ್ವಜನಿಕರ ನೆರವಿನೊಂದಿಗೆ ಸೋಮವಾರ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಹಿಡಿದಿದ್ದು, ಮಂಗಳವಾರ ಮೈಸೂರು ಪುನರ್ವಸತಿ ಕೇಂದ್ರಕ್ಕೆ ಬಿಡಲು ಕರೆದೂಯ್ಯಲಾಯಿತು.

ತಾಲ್ಲೂಕಿನ ಚಿಕ್ಕಕೊಟ್ಟಿಗೇನಹಳ್ಳಿ ಗ್ರಾಮದ ಮಲ್ಲಿಕಾರ್ಜುನಯ್ಯ ಅವರ ತೋಟದಲ್ಲಿ ಎರಡು ದಿನದಿಂದ ತೋಟದ ಪ್ರದೇಶದಲ್ಲಿ ಬೀಡುಬಿಟ್ಟಿದ್ದ ಚಿರತೆಯನ್ನು ಕಂಡು ಸಾರ್ವಜನಿಕರು ಗಾಬರಿಗೊಂಡಿದ್ದರು. ಅರಣ್ಯ ಇಲಾಖೆಯವರು ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಹರಸಾಹಸ ಪಡಬೇಕಾಯಿತು.

ಇನ್ನೂ ಬಲೆಗೆ ಬಿದ್ದಿದ್ದ ಚಿರತೆ ಸಾರ್ವಜನಿಕರ ಕೂಗಾಟದಿಂದ ತಪ್ಪಿಸಿಕೊಳ್ಳುತ್ತಿತ್ತು. ಸುಸ್ತಾಗಿದ್ದ ಚಿರತೆಯ ಬಾಲವನ್ನು ರಂಗಾಪುರ ಗ್ರಾಮದ ಆನಂದ್ ಎಂಬ ಯುವಕ ಹಿಡಿದಿದ್ದಾರೆ. ತಕ್ಷಣ ಅರಣ್ಯ ಇಲಾಖೆ ಸಿಬ್ಬಂದಿ ಬಲೆ ಬೀಸಿದ ಪರಿಣಾಮ ಚಿರತೆ ಸೆರಯಾಗಿದೆ.

ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮ ಮಾರ್ಗದರ್ಶನದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭರತ್ ಡಿ., ವಲಯ ಅರಣ್ಯಾಧಿಕಾರಿ ಕೆ.ಎಲ್ ಮಧು, ಉಪ ಅರಣ್ಯಾಧಿಕಾರಿ ಪ್ರದೀಪ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯ ಕಾರ್ಯಚರಣೆ ನಡೆಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಪಾಟ್ನಾ ಆಸ್ಪತ್ರೆಯೊಳಗೆ ನುಗ್ಗಿ ಕೊಲೆ ಆರೋಪಿಯ ಬರ್ಬರ ಹತ್ಯೆ: ಐವರು ಕೋಲ್ಕತ್ತಾದಲ್ಲಿ ಅರೆಸ್ಟ್‌

ಹಿಮಾಚಲ ಮೇಘಸ್ಫೋಟದ ವೇಳೆ ಗರ್ಭಿಣಿ ಶಿಕ್ಷಕರನ್ನು ಹೊತ್ತೊಯ್ದ ವಿದ್ಯಾರ್ಥಿಗಳು, ಭಾರೀ ಮೆಚ್ಚುಗೆ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಮುಂದಿನ ಸುದ್ದಿ
Show comments