Publish Date: Mon, 26 Sep 2022 (08:41 IST)
Updated Date: Mon, 26 Sep 2022 (10:47 IST)
ಬೀದರ್ : ಜಮ್ಮು ಮತ್ತು ಕಾಶ್ಮೀರದಲ್ಲಿ ಆಮ್ಲಜನಕದ ಕೊರತೆಯಿಂದ ಬೀದರ್ ಮೂಲದ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ.
ರಾಮದಾಸ್ ಚಂದಾಪೂರೆ(35) ಹುತಾತ್ಮರಾದ ಯೋಧ. ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಬೇಡಕುಂದಾ ಗ್ರಾಮದ ಯೋಧ ಕಳೆದ ಹಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.
15 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಆಮ್ಲಜನಕದ ಕೊರತೆಯಿಂದ ಹುತಾತ್ಮರಾಗಿದ್ದಾರೆ.