Select Your Language

Notifications

webdunia
webdunia
webdunia
webdunia

ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ: ಹೀಗೆ ಮಾಡದೇ ಇದ್ರೆ ನಿಮಗೆ ಹಣ ಬರಲ್ಲ

Gruhalakshmi scheme money
ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ ತರಲಾಗಿದೆ. ಇನ್ನು ಮುಂದೆ ಹೀಗೆ ಮಾಡಿಲ್ಲ ಎಂದರೆ ನಿಮಗೆ ಹಣ ಬರದು.

ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದುದು. ಈ ಯೋಜನೆಯಡಿಯಲ್ಲಿ ಮನೆಯ ಯಜಮಾನಿಯ ಖಾತೆಗೆ ಪ್ರತೀ ತಿಂಗಳು 2,000 ರೂ. ಸಂದಾಯ ಮಾಡಲಾಗುತ್ತದೆ. ಆದರೆ ಈ ಯೋಜನೆಯ ದುರುಪಯೋಗ ಪಡೆಯಲು ಸರ್ಕಾರದ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಮುಂದಿನ ತಿಂಗಳು ಬಯೋಮೆಟ್ರಿಕ್ ಮಾಡಿಸಿಕೊಳ್ಳಬೇಕು. ಒಂದು ವೇಳೆ ನೀವು ಬಯೋಮೆಟ್ರಿಕ್ ಮಾಡಿಸಿಕೊಳ್ಳದೇ ಇದ್ದರೆ ಮುಂದಿನ ತಿಂಗಳು ಫಲಾನುಭವಿಗಳ ಖಾತೆಗೆ ಹಣ ಬರಲ್ಲ.

ಬಯೋಮೆಟ್ರಿಕ್ ಮಾಡಿಸಿಕೊಳ್ಳಲು 5 ರೂ. ಶುಲ್ಕ ಪಾವತಿಸಬೇಕಾಗುತ್ತದೆ. ಗೃಹಲಕ್ಷ್ಮಿ ಬಯೋಮೆಟ್ರಿಕ್ ಗಾಗಿ ಆಪ್ ಸಿದ್ಧಪಡಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದಲೇ ಬಯೋಮೆಟ್ರಿಕ್ ಮಾಡಿಸಿಕೊಳ್ಳುವ ಪ್ರಕ್ರಿಯೆ ಆರಂಭವಾಗಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಡಿಕೆ ಶಿವಕುಮಾರ್ ಗೆ ಮತ್ತೊಂದು ತಲೆನೋವು ಶುರು: ಕೃಷ್ಣಭೈರೇಗೌಡ ದೆಹಲಿಗೆ