Select Your Language

Notifications

webdunia
webdunia
webdunia
webdunia

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

Self-proclaimed godman Asaram

Sampriya

ಬೆಂಗಳೂರು , ಬುಧವಾರ, 29 ಅಕ್ಟೋಬರ್ 2025 (17:33 IST)
Photo Credit X
ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ಅಸಾರಾಂ ಅವರಿಗೆ ವೈದ್ಯಕೀಯ ಕಾರಣ ನೀಡಿ ರಾಜಸ್ಥಾನ ಹೈಕೋರ್ಟ್ ಬುಧವಾರ ಆರು ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರಸ್ತುತ ಜೋಧ್‌ಪುರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ, ತಮ್ಮ ಆರೋಗ್ಯ ಹದಗೆಟ್ಟಿರುವ ಕಾರಣ ಮತ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯವನ್ನು ಉಲ್ಲೇಖಿಸಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರ ವಿಭಾಗೀಯ ಪೀಠ ನಡೆಸಿತು.

ಸದ್ಯ ಅಸಾರಾಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 2013ರ ಆಗಸ್ಟ್‌ನಿಂದ ಅಸಾರಾಮ್ ಬಾಪು ಜೈಲಿನಲ್ಲಿದ್ದಾನೆ.

ಎರಡು ತಿಂಗಳ ನಂತರ, ಗುಜರಾತ್‌ನ ಸೂರತ್‌ನಲ್ಲಿರುವ ತಮ್ಮ ಆಶ್ರಮದಲ್ಲಿ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಅಸಾರಾಂ ಮತ್ತು ಅವರ ಮಗ ನಾರಾಯಣ ಸಾಯಿ ವಿರುದ್ಧ ಪ್ರಕರಣ ದಾಖಲಿಸಲಾಯಿತು.

ಜನವರಿಯಲ್ಲಿ, 2013 ರ ಅತ್ಯಾಚಾರ ಪ್ರಕರಣದಲ್ಲಿ ಮಾರ್ಚ್ ಅಂತ್ಯದವರೆಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಅಸಾರಾಂಗೆ ಮಧ್ಯಂತರ ಜಾಮೀನು ನೀಡಿತು.

ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ಪೀಠವು ಅಸಾರಾಮ್ ಅವರು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸಾಕ್ಷ್ಯಗಳನ್ನು ಹಾಳುಮಾಡಲು ಪ್ರಯತ್ನಿಸಬಾರದು ಮತ್ತು ಅವರ ಅನುಯಾಯಿಗಳನ್ನು ಭೇಟಿ ಮಾಡಬಾರದು ಎಂದು ನಿರ್ದೇಶಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನವೆಂಬರ್ ಕ್ರಾಂತಿ, ಅವನ ಹಣೆಯಲ್ಲಿ ಬರೆದ ಹಾಗೇ ಆಗುತ್ತದೆ: ಡಿಕೆ ಸುರೇಶ್‌