ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ ಬಿಗ್‌ ರಿಲೀಫ್‌

Sampriya
ಬುಧವಾರ, 29 ಅಕ್ಟೋಬರ್ 2025 (17:33 IST)
Photo Credit X
ಬೆಂಗಳೂರು: ಸ್ವಯಂ ಘೋಷಿತ ದೇವಮಾನವ ಅಸಾರಾಂ ಅವರಿಗೆ ವೈದ್ಯಕೀಯ ಕಾರಣ ನೀಡಿ ರಾಜಸ್ಥಾನ ಹೈಕೋರ್ಟ್ ಬುಧವಾರ ಆರು ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರಸ್ತುತ ಜೋಧ್‌ಪುರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ, ತಮ್ಮ ಆರೋಗ್ಯ ಹದಗೆಟ್ಟಿರುವ ಕಾರಣ ಮತ್ತು ವೈದ್ಯಕೀಯ ಚಿಕಿತ್ಸೆಯ ಅಗತ್ಯವನ್ನು ಉಲ್ಲೇಖಿಸಿ ಜಾಮೀನು ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರ ವಿಭಾಗೀಯ ಪೀಠ ನಡೆಸಿತು.

ಸದ್ಯ ಅಸಾರಾಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 2013ರ ಆಗಸ್ಟ್‌ನಿಂದ ಅಸಾರಾಮ್ ಬಾಪು ಜೈಲಿನಲ್ಲಿದ್ದಾನೆ.

ಎರಡು ತಿಂಗಳ ನಂತರ, ಗುಜರಾತ್‌ನ ಸೂರತ್‌ನಲ್ಲಿರುವ ತಮ್ಮ ಆಶ್ರಮದಲ್ಲಿ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಅಸಾರಾಂ ಮತ್ತು ಅವರ ಮಗ ನಾರಾಯಣ ಸಾಯಿ ವಿರುದ್ಧ ಪ್ರಕರಣ ದಾಖಲಿಸಲಾಯಿತು.

ಜನವರಿಯಲ್ಲಿ, 2013 ರ ಅತ್ಯಾಚಾರ ಪ್ರಕರಣದಲ್ಲಿ ಮಾರ್ಚ್ ಅಂತ್ಯದವರೆಗೆ ವೈದ್ಯಕೀಯ ಕಾರಣಗಳಿಗಾಗಿ ಸುಪ್ರೀಂ ಕೋರ್ಟ್ ಅಸಾರಾಂಗೆ ಮಧ್ಯಂತರ ಜಾಮೀನು ನೀಡಿತು.

ನ್ಯಾಯಮೂರ್ತಿಗಳಾದ ಎಂಎಂ ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರನ್ನೊಳಗೊಂಡ ಪೀಠವು ಅಸಾರಾಮ್ ಅವರು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸಾಕ್ಷ್ಯಗಳನ್ನು ಹಾಳುಮಾಡಲು ಪ್ರಯತ್ನಿಸಬಾರದು ಮತ್ತು ಅವರ ಅನುಯಾಯಿಗಳನ್ನು ಭೇಟಿ ಮಾಡಬಾರದು ಎಂದು ನಿರ್ದೇಶಿಸಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments