ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಒಪ್ಪಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಎ2, ಮಲ್ಲಿಕಾರ್ಜುನ ಸ್ವಾಮಿ ಎ3, ದೇವರಾಜು ಎ4 ಆಗಿದ್ದರು. ಇವರೆಲ್ಲರನ್ನೂ ಕೋರ್ಟ್ ಕಳಂಕ ಮುಕ್ತ ಎಂದಿದ್ದು ಉಳಿದವರ ವಿರುದ್ಧ ತನಿಖೆ ಮುಂದುವರಿಸಲು ಸೂಚಿಸಿದೆ.
ಮುಡಾ ಹಗರಣದ ಬಗ್ಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಿಎಂ ಮತ್ತು ಪತ್ನಿ ವಿರುದ್ಧ ಯಾವುದೇ ಸಾಕ್ಷ್ಯವಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಇದನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ಸಿಎಂ ಮತ್ತು ಅವರ ಆಪ್ತರಿಗೆ ಪ್ರಕರಣಕ್ಕೆ ಸಂಬಂಧಿಸಿ ನೀಡಲಾಗಿದ್ದ ಬಿ ರಿಪೋರ್ಟ್ ಮಾನ್ಯ ಮಾಡಿರುವ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಇದರಿಂದ ಸಿದ್ದರಾಮಯ್ಯ ಮುಡಾ ಹಗರಣದಿಂದ ಪಾರಾಗಿದ್ದಾರೆ. ಉಳಿದವರ ವಿರುದ್ಧ ಇನ್ನೂ ತನಿಖೆ ಮುಂದುವರಿಯಲಿದೆ.