Select Your Language

Notifications

webdunia
webdunia
webdunia
webdunia

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್‌ ರಿಲೀಫ್‌

Mahesh Shetty Thimarody

Sampriya

ಮಂಗಳೂರು , ಸೋಮವಾರ, 17 ನವೆಂಬರ್ 2025 (16:53 IST)
ಮಂಗಳೂರು: ಸೌಜನ್ಯ ಪರ ಹೋರಾಟಗಾರ, ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ  ವಿರುದ್ಧದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದ್ದರಿಂದ ಬಿಗ್ ರಿಲೀಫ್ ಸಿಕ್ಕಿದೆ. 

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಪುರಸ್ಕರಿಸಿದ್ದು, ಗಡಿಪಾರು ಆದೇಶವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಇದರೊಂದಿಗೆ ಸೂಕ್ತ ಕಾರಣ, ಸೆಕ್ಷನ್​ಗಳೊಂದಿಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆಯನ್ನು ನೀಡಿದೆ.

ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣದಲ್ಲಿ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮಂಗಳೂರಿನಿಂದ ಮಂಗಳೂರಿನಿಂದ ಗಡಿಪಾರು ಮಾಡಿ ಸಪ್ಟೆಂಬರ್ 20ರಂದೇ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದರು.

ಇನ್ನೂ ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ವಿವಿಧ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆ ಅವರನ್ನು ಗಡಿಪಾರು ಮಾಡುವಂತೆ  ಆಗ್ರಹಗಳು ವ್ಯಕ್ತವಾಗಿದ್ದವು. 


Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ