Select Your Language

Notifications

webdunia
webdunia
webdunia
webdunia

ಪಶ್ಚಿಮ ಬಂಗಾಲ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆ

Mamata Banerjee
Photo Credit: Instagram
ಕೋಲ್ಕತ್ತಾ: ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶಕ್ಕೆ ಮುನ್ನ ದೀದಿ ಮಮತಾ ಬ್ಯಾನರ್ಜಿಗೆ ದೊಡ್ಡ ಹಿನ್ನಡೆಯಾಗಿದೆ. ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ.

ಪಶ್ಚಿಮ ಬಂಗಾಲ ಚುನಾವಣೆಯ ಫಲಿತಾಂಶ ಮೇ 4 ರಂದು ಪ್ರಕಟವಾಗಲಿದೆ. ಪಂಚ ರಾಜ್ಯ ಚುನಾವಣೆಗಳ ಪೈಕಿ ಪಶ್ಚಿಮ ಬಂಗಾಲ ಚುನಾವಣೆ ಫಲಿತಾಂಶ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಇಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ಬಿಗ್ ಫೈಟ್ ನಡೆಯುತ್ತಿದೆ.

ಇದೀಗ ಪಶ್ಚಿಮ ಬಂಗಾಲ ಚುನಾವಣೆ ಮತ ಎಣಿಕೆ ಕಾರ್ಯಕ್ಕೆ ಸೂಪರ್ ವೈಸರ್ ಗಳಾಗಿ ಕೇಂದ್ರ ಸರ್ಕಾರೀ ಅಧಿಕಾರಿಗಳನ್ನು ನೇಮಿಸಿರುವುದನ್ನು ಪ್ರಶ್ನಿಸಿ ದೀದಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇವರು ಕೇಂದ್ರ ಸರ್ಕಾರದ ಅಣತಿಯಂತೆ ಕೆಲಸ ಮಾಡುವವರು ಎಂದು ದೀದಿ ಆರೋಪವಾಗಿದೆ.

ಆದರೆ ದೀದಿ ಸಲ್ಲಿಸಿದ್ದ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರೀ ಅಧಿಕಾರಿಗಳನ್ನು ನಿಯೋಜಿಸಿರುವುದರಲ್ಲಿ ಕಾನೂತ್ಮಕವಾಗಿ ಯಾವುದೇ ತಪ್ಪಿಲ್ಲ ಎಂದು ತೀರ್ಪು ನೀಡಿದೆ. ಇದು ದೀದಿಗೆ ದೊಡ್ಡ ಹಿನ್ನಡೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ