ಮೈತ್ರಿ ಸರ್ಕಾರಕ್ಕೆ ಮತ್ತೆ ಬಿಗ್ ಶಾಕ್; 13 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ

Webdunia
ಶನಿವಾರ, 6 ಜುಲೈ 2019 (13:24 IST)
ಬೆಂಗಳೂರು : ಮೈತ್ರಿ ಸರ್ಕಾರಕ್ಕೆ  ಮತ್ತೆ ಬಿಗ್ ಶಾಕ್ ಎದುರಾಗಿದ್ದು, ಬರೋಬ್ಬರಿ 13 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎಂಬ ಮಾಹಿತಿ ತಿಳಿದುಬಂದಿದೆ.




ಈಗಾಗಲೇ ಕಾಂಗ್ರೆಸ್ ನ ಇಬ್ಬರು ಶಾಸಕರಾದ ಆನಂದ್ ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರದಲ್ಲಿ ತಲ್ಲಣ ಶುರುವಾಗಿದೆ. ಇದೀಗ  ಮತ್ತೆ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿದಂತೆ 13ಕ್ಕೂ ಹೆಚ್ಚು ಅತೃಪ್ತ ಶಾಸಕರು ಇಂದು ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಅಥಣಿ ಶಾಸಕ ಮಹೇಶ್ ಕುಮಟಳ್ಳಿ, ಹಿರೇಕೆರೂರು ಶಾಸಕ ಬಿ.ಸಿಪಾಟೀಲ್, ಮಸ್ಕಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಮತ್ತು ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ್ ರಾಜೀನಾಮೆ ಕೊಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹಾಗೇ  ಬೆಂಗಳೂರಿನ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜು, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ.ಆರ್ ಪೇಟೆ ಶಾಸಕ. ನಾರಾಯಣ ಗೌಡ ಇವರೆಲ್ಲರೂ ಹೆಸರು ರಾಜೀನಾಮೆ ಪಟ್ಟಿಗೆ ಹೊಸದಾಗಿ ಸೇರಿಕೊಂಡಿದೆ ಎನ್ನಲಾಗಿದೆ. ಈ ಸುದ್ದಿ ಕೇಳಿಬಂದ ಹಿನ್ನಲೆಯಲ್ಲಿ  ಈಗಾಗಲೇ ಕಾಂಗ್ರೆಸ್ ನಾಯಕರು ಶಾಸಕರನ್ನು ಭೇಟಿ ಮಾಡಿ ಮನವೊಲಿಕೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments