Publish Date: Tue, 08 Sep 2026 (19:24 IST)
Updated Date: Tue, 08 Sep 2026 (19:29 IST)
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಆಘಾತವಾಗಿದೆ. ರಾಜ್ಯದ ಅಧಿಕಾರಿಗಳ ಪ್ರಬಲ ವಾದದ ಹೊರತಾಗಿಯೂ ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆಯನ್ನು ನೀಡಿದೆ.
ಈ ಮೂಲಕ ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂಬ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನ ಎತ್ತಿಹಿಡಿದಿದೆ.
ಈ ಸೂಚನೆಯನ್ನು CWMA ಅಧ್ಯಕ್ಷ ಎಸ್.ಕೆ. ಹಲ್ದಾರ್ ಅವರ ನೇತೃತ್ವದಲ್ಲಿ ಇಂದು ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಸಭೆಯ ನೀಡಲಾಗಿದೆ.
ಸಭೆಯಲ್ಲಿ ತಮಿಳುನಾಡಿನ ಅಧಿಕಾರಿಗಳು ವರ್ಚ್ಯುಯಲ್ ಮೂಲಕ ಭಾಗವಹಿಸಿದ್ದರು. ಕರ್ನಾಟಕದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗು7/ಪ್ತಾ ಕೂಡ ವರ್ಚ್ಯುಯಲ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು.
ಇನ್ನೂ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಸಂಬಂಧ ಭಾರೀ ಚರ್ಚೆಗಳು ನಡೆಯುತ್ತಲೇ ಬಂದೊದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಶಿಫಾರಸು ಮಾಡಿತ್ತು. ಇದೀಗ CWMA ಕೂಡ ಅದೇ ಪ್ರಮಾಣದ ನೀರು ಹರಿಸಲು ಆದೇಶಿಸಿರುವುದು ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ