ಮದ್ಯ ಪ್ರಿಯರಿಗೆ ಸರಕಾರ ಬಿಗ್ ಶಾಕ್ ನೀಡಿದೆ.
ಕಲಬುರಗಿ ನಗರದ ವಿವಿಧ ಕಡೆಗಳಲ್ಲಿ ಮಾರ್ಚ್ 9ರಿಂದ 11ರವರೆಗೆ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿದೆ.
ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಲಬುರಗಿ ನಗರದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮಾರ್ಚ್ 9 ರ ಬೆಳಿಗ್ಗೆ 6 ರಿಂದ ಮಾರ್ಚ್ 11 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಕಲಬುರಗಿ ನಗರದ ಪೊಲೀಸ್ ಆಯುಕ್ತರಾದ ಎಂ.ಎನ್. ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.