Select Your Language

Notifications

webdunia
webdunia
webdunia
webdunia

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

Karnataka RSS Row

Sampriya

ರಾಯಚೂರು , ಶುಕ್ರವಾರ, 17 ಅಕ್ಟೋಬರ್ 2025 (18:46 IST)
Photo Credit X
ರಾಯಚೂರು: ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಕುವ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. 

ಅಮಾನತುಗೊಂಡ ಅಧಿಕಾರಿಯನ್ನು ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. 

ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ