Webdunia - Bharat's app for daily news and videos

Install App

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

Sampriya
ಶುಕ್ರವಾರ, 17 ಅಕ್ಟೋಬರ್ 2025 (18:46 IST)
Photo Credit X
ರಾಯಚೂರು: ರಾಜ್ಯದಲ್ಲಿ ಸರ್ಕಾರಿ ಸಂಸ್ಥೆಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳಿಗೆ ಬ್ರೇಕ್ ಹಾಕುವ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. 

ಅಮಾನತುಗೊಂಡ ಅಧಿಕಾರಿಯನ್ನು ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಎಂದು ಗುರುತಿಸಲಾಗಿದೆ. 

ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

ಇದೇ ಅಕ್ಟೋಬರ್12 ರಂದು ಲಿಂಗಸುಗೂರು ಪಟ್ಟಣದಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಂಥಸಂಚಲನ ಕಾರ್ಯಕ್ರಮ ನಡೆದಿತ್ತು. ಈ ಪಥಸಂಚಲನದಲ್ಲಿ ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಗಣವೇಷ ಧರಿಸಿ ಪ್ರವೀಣ್ ಭಾಗವಹಿಸಿದ್ದರು.

ಕರ್ನಾಟಕ ಸಿವಿಲ್ ಸೇವಾ ನಿಯಮಗಳ ಉಲ್ಲಂಘನೆ ಹಾಗೂ ಸರ್ಕಾರಿ ನೌಕರನ ತರವಲ್ಲದ ರೀತಿ ನಡೆದುಕೊಂಡಿದ್ದರಿಂದ ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಬ್ಯಾಕ್ಟೀರಿಯ ಪತ್ತೆ, ಸಿಎಜಿ ವರದಿ

ನಾನು ಎಂದಿಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರಲಿಲ್ಲ, ಡೆತ್‌ನೋಟ್ ಬರೆದಿಟ್ಟು ಮಾಜಿ ಸ್ಪೀಕರ್‌ ಆಶಿಶ್ ಬ್ಯಾನರ್ಜಿ ಪಕ್ಷದ ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣು

ತುಂಗಭದ್ರಾ ನದಿಯಿಂದ ಆಂಧ್ರದ ಕಡೆ ಹರಿಯುವ ನೀರಿಗೆ ಕರ್ನಾಟಕ ರೈತರಿಂದ ತಡೆ, ನೀರು ಹರಿದು ಹೋಗದಂತೆ ಏನ್ ಮಾಡಿದ್ರು ನೋಡಿ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಮುಂದಿನ ಸುದ್ದಿ
Show comments