ಧಾರವಾಡ: ತಾಲ್ಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದ ಒಂದೇ ಕುಟುಂಬದ ನಾಲ್ವರು ಬಾವಿಗೆ ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ವಿಠಲ ಶಿಂಧೆ(75), ಪುತ್ರ ನಾರಾಯಣ ಶಿಂಧೆ(38), ಮೊಮ್ಮಕ್ಕಳಾದ ಶಿವರಾಜ(12) ಹಾಗೂ ಶ್ರೀನಿಧಿ(10) ಎಂದು ಗುರುತಿಸಲಾಗಿದೆ.
ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ.
ತನಿಖೆ ನಡೆಯುತ್ತಿದೆ.