Publish Date: Mon, 01 Jul 2019 (09:49 IST)
Updated Date: Mon, 01 Jul 2019 (09:50 IST)
ಬೆಂಗಳೂರು : ಈಗಾಗಲೇ ಅತಂತ್ರ ಪರಿಸ್ಥಿತಿಯಲ್ಲಿ ಸಿಲುಕೊಂಡಿರುವ ಮೈತ್ರಿ ಸರ್ಕಾರಕ್ಕೆ ಇದೀಗ ಹೊಸಪೇಟೆ ವಿಧಾಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಬಿಗ್ ಶಾಕ್ ನೀಡಿದ್ದಾರೆ.
ಇಂದು ಬೆಳಿಗ್ಗೆ ಬೆಂಗಳೂರಿನ ದೊಮ್ಮಲೂರಿನಲ್ಲಿರುವ ಸ್ಪೀಕರ್ ರಮೇಶ್ ಕುಮಾರ್ ನಿವಾಸಕ್ಕೆ ತೆರಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೈತ್ರಿ ಸರ್ಕಾರ ರಚನೆಯಾದ ಪ್ರಾರಂಭದಲ್ಲೇ ಸಚಿವ ಸ್ಥಾನಕ್ಕಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೇ ಜಿಂದಾಲ್ ಭೂಮಿ ವಿಚಾರದಲ್ಲಿಯೂ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಇದೀಗ ಅವರು ರಾಜೀನಾಮೆ ನೀಡಲು ನಿಖರವಾದ ಕಾರಣ ತಿಳಿದುಬಂದಿಲ್ಲ.