Publish Date: Fri, 13 Sep 2019 (10:47 IST)
Updated Date: Fri, 13 Sep 2019 (10:49 IST)
ಬೆಂಗಳೂರು : ಜೆಡಿಎಸ್ ನ ಕೆಲವು ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
6 ಮಂದಿ ಜೆಡಿಎಸ್ ನ ಹಾಲಿ ಶಾಸಕರು ಹಾಗೂ ಕಳೆದ ಬಾರಿ ಸೋತ 6 ಅಭ್ಯರ್ಥಿಗಳು ಸೇರಿ ಒಟ್ಟು 12 ಮಂದಿ ಜೆಡಿಎಸ್‍ಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ರಾಜೀನಾಮೆ ನೀಡುವ ಬಹುತೇಕ ಜೆಡಿಎಸ್ ಶಾಸಕರು ಕಾಂಗ್ರೆಸ್ ಗೆ ಸೇರಲಿದ್ದು, ರಾಜೀನಾಮೆ ನೀಡುವ 12 ಶಾಸಕರ ಪಟ್ಟಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಅವರ ಕೈ ಸೇರಿದೆ ಎಂಬ ಮಾಹಿತಿ ತಿಳಿದುಬಂದಿದೆ.