Publish Date: Mon, 27 Apr 2026 (13:10 IST)
Updated Date: Mon, 27 Apr 2026 (13:12 IST)
ಬೆಂಗಳೂರು: ಮೇ 15 ರೊಳಗೆ ಹೈಕಮಾಂಡ್ ಡಿಕೆ ಶಿವಕುಮಾರ್ ಗೆ ಬಂಪರ್ ಗಿಫ್ಟ್ ಕೊಡಲಿದೆ ಎಂದು ಡಿಕೆಶಿ ಪರ ಶಾಸಕರು ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯ ಸುಳಿವು ನೀಡಿದ್ದಾರೆ.
ಇತ್ತೀಚೆಗಷ್ಟೇ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ. ಅಧಿಕಾರ ಹಸ್ತಾಂತರದ ಬಗ್ಗೆ ಸ್ಪಷ್ಟ ಸಂದೇಶ ನೀಡಬೇಕು ಎಂದು ಡಿಕೆ ಶಿವಕುಮಾರ್ ಈ ವೇಳೆ ಬೇಡಿಕೆ ಮುಂದಿಟ್ಟಿದ್ದರು ಎನ್ನಲಾಗಿದೆ.
ಇದರ ನಡುವೆಯೇ ಈಗ ಕುಣಿಗಲ್ ಶಾಸಕ ಡಾ ರಂಗನಾಥ್ ಶೀಘ್ರದಲ್ಲೇ ಡಿಕೆ ಶಿವಕುಮಾರ್ ಗೆ ಸೂಕ್ತ ಸ್ಥಾನ ಮಾನ ಸಿಗಲಿದೆ ಎಂದಿದ್ದಾರೆ. ಮೇ 15 ರೊಳಗೆ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎಂದು ಅವರು ಹೇಳಿಕೆ ನೀಡಿದ್ದಾರೆ. ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಫಲ ದೇವರಿಗೆ ಬಿಡಬೇಕು. ಅದೇ ರೀತಿ ಡಿಕೆ ಶಿವಕುಮಾರ್ ಸಾಹೇಬ್ರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಅವರಿಗೆ ತಕ್ಕ ಪ್ರತಿಫಲ ಸಿಗಲಿದೆ ಎಂದಿದ್ದಾರೆ.
ಇನ್ನೊಂದೆಡೆ ವಿಧಾನಸಭೆ ಮುಖ್ಯ ಸಚೇತಕ, ಶಾಸಕ ಅಶೋಕ್ ಪಟ್ಟಣ್ ಕೂಡಾ ಮೇ 15 ರೊಳಗೆ ಹೈಕಮಾಂಡ್ ಸಿಹಿ ಸುದ್ದಿ ನೀಡಲಿದೆ ಎಂದಿದ್ದಾರೆ. ಸಚಿವ ಸಂಪುಟ ಪುನರಾಚನೆ ಬಗ್ಗೆ ಮೇ 15 ರೊಳಗೆ ಸಿಹಿ ಸುದ್ದಿ ನೀಡುವ ಭರವಸೆಯನ್ನು ರಣದೀಪ್ ಸುರ್ಜೇವಾಲ ನೀಡಿದ್ದಾರೆ. ನಾವು 40 ಜನ ಶಾಸಕರು ಮತ್ತೊಮ್ಮೆ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬರುತ್ತೇವೆ. ಡಿಕೆ ಶಿವಕುಮಾರ್ ಅವರಿಗೆ ಬರ್ತ್ ಡೇಗೆ ಸಿಹಿ ಸುದ್ದಿ ನೀಡೋದು, ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದಿದ್ದಾರೆ. ಈ ಹೇಳಿಕೆಗಳನ್ನು ಗಮನಿಸುತ್ತಿದ್ದರೆ ಮೇ ತಿಂಗಳಿನಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗೋದು ಖಚಿತವೆನಿಸುತ್ತಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ