ಬೆಂಗಳೂರು ಎಟಿಎಂ ವಾಹನ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಕಿಡಿಗೇಡಿಗಳು ಬಳಸಿದ್ದ ಕಾರು ಪತ್ತೆ

Sampriya
ಗುರುವಾರ, 20 ನವೆಂಬರ್ 2025 (15:19 IST)
Photo Credit X
ಬೆಂಗಳೂರು: ಬುಧವಾರ ಬೆಂಗಳೂರು ನಗರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಎಟಿಎಂಗೆ ಹಣ ಹಾಕುವ ಕಾರು ತಡೆದು ₹ 7 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಕಾರು ಪತ್ತೆಯಾಗಿದೆ.

ತಿರುಪತಿಯಲ್ಲಿ ಇನ್ನೋವಾ ಕಾರು ಬಿಟ್ಟು ಆರೋಪಿಗಳು ಬೇರೆ ಕಡೆ ಪರಾರಿಯಾಗಿರುವ ಸಾಧ್ಯತೆ ಇದೆ. ಹಣದ ಸಮೇತ ಬೇರೆ ವಾಹನದಲ್ಲಿ ತಪ್ಪಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ. 

ಜೆ.ಪಿ. ನಗರದ ಹೆಚ್‌ಡಿಎಫ್‌ಸಿ ಬ್ಯಾಂಕ್‌ನಿಂದ ಹಣ ಸಂಗ್ರಹಿಸಿ ಗೋವಿಂದಪುರ ಎಟಿಎಂ ಘಟಕಗಳಿಗೆ ತುಂಬಲು ಸಿಎಂಎಸ್‌ ಏಜೆನ್ಸಿಯ ನಾಲ್ವರು ಸಿಬ್ಬಂದಿ ತೆರಳುತ್ತಿದ್ದರು. ಮಾರ್ಗ ಮಧ್ಯೆ ವಾಹನ ತಡೆಗಟ್ಟಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಆರೋಪಿಗಳು ದರೋಡೆ ಮಾಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ತಿರುಪತಿ ಸುತ್ತಮುತ್ತ ಪೊಲೀಸರು ಸಿಸಿಟಿವಿಗಳ ಹುಡುಕಾಟ ನಡೆಸುತ್ತಿದ್ದಾರೆ. ಎಟಿಎಂ ಘಟಕಗಳಿಗೆ ಹಣ ಪೂರೈಸುತ್ತಿದ್ದ ಖಾಸಗಿ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ ಬಳಿಕ ಪಿಸ್ತೂಲ್‌ ತೋರಿಸಿ ಜೀವ ಬೆದರಿಕೆ ಹಾಕಿ ದುಷ್ಕರ್ಮಿಗಳು ₹ 7.11 ಕೋಟಿ ಹಣ ದೋಚಿ ಪರಾರಿಯಾಗಿದ್ದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments