Publish Date: Wed, 29 Jul 2026 (18:07 IST)
Updated Date: Wed, 29 Jul 2026 (18:09 IST)
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬರೋಬ್ಬರಿ 84,31,612 ಮತದಾರರನ್ನು ಮೊದಲ ಕರಡು ಮತದಾರರ ಪಟ್ಟಿಯಿಂದ ಹೊರಗಿಡಲು ಪಟ್ಟಿಮಾಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ತಿಳಿಸಿದರು.
ಇಂದು ಅವರು ಇಂದು ಸುದ್ದಿಗೋಷ್ಠಿ ನಡೆಸಿ ಸವಿಸ್ತಾರವಾದ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಮತದಾರರನ ಸ್ಥಳ ಮಹಜರು ಮಾಡಲಾಗಿದ್ದು, ಮೃತರ ಡೆತ್ ಸರ್ಟಿಫಿಕೇಟ್ ಸಂಗ್ರಹಿಸಿ, ಸಂಬಂಧಪಟ್ಟವರಿಂದ ಸಹಿ ಕೂಡ ಪಡೆಯಲಾಗಿದೆ.
ಹೀಗಾಗಿ ಈ 84 ಲಕ್ಷಕ್ಕೂ ಅಧಿಕ ಜನರನ್ನು ಮೊದಲ ಕರಡು ಪಟ್ಟಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 1.3 ಕೋಟಿ ಮತದಾರರಿದ್ದಾರೆ. ಆದರೆ ಇದುವರೆಗೆ ಕೇವಲ 47.97 ಲಕ್ಷ ಜನ ಮಾತ್ರ ಅರ್ಜಿ ವಾಪಸ್ ಕೊಟ್ಟಿದ್ದಾರೆ. ಬರೋಬ್ಬರಿ 39.38 ಲಕ್ಷ (ಸುಮಾರು 40%) ಮತದಾರರ ಸುಳಿವೇ ಸಿಕ್ಕಿಲ್ಲ. ಇನ್ನೂ 16.57 ಲಕ್ಷ ಮತದಾರರು ಅರ್ಜಿ ವಾಪಸ್ ನೀಡಬೇಕಿದೆ ಎಂದು ಮಾಹಿತಿ ನೀಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ