ಬೈಕ್​​​-ಬಸ್​​​​ ಡಿಕ್ಕಿ, ಮೂವರು ಸಾವು

Webdunia
ಮಂಗಳವಾರ, 6 ಡಿಸೆಂಬರ್ 2022 (17:55 IST)
ರಾಯಚೂರು ತಾಲ್ಲೂಕಿನ ಗುಡದೂರು ಗ್ರಾಮದ ಬಳಿ ಸರ್ಕಾರಿ‌ ಬಸ್ ಬೈಕ್‌ಗೆ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಯುವಕ‌ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರ ಪ್ರದೇಶ ಮೂಲದ ನಾಗರಾಜ , ಸೀನು ಹಾಗೂ ಜಯಪಾಲ ಮೃತ ದುರ್ದೈವಿಗಳು. ಮತ್ತೊಬ್ಬ ಶ್ರೀಕಾಂತ ಕರ್ನೂಲು ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಭತ್ತ ಕಟಾವು ಮಾಡಲು ಯಂತ್ರದ ಸಮೇತ ಮಸ್ಕಿಗೆ ಬಂದಿದ್ದರು. ಗುಡದೂರು ಗ್ರಾಮಕ್ಕೆ ಭತ್ತ ಕಟಾವು ಮಾಡಲು ಹೊರಟಾಗ ಅಪಘಾತ ಸಂಭವಿಸಿದೆ. ಒಂದೇ ಬೈಕ್ ಮೇಲೆ ನಾಲ್ವರು ಪ್ರಯಾಣ ಮಾಡುತ್ತಿದ್ದ ಶಂಕೆ ವ್ಯಕ್ತವಾಗಿದೆ. ಯಾದಗಿರಿ ಡಿಪೋಗೆ ಸೇರಿದ ಬಸ್ ಇದಾಗಿದ್ದು, ಅಪಘಾತ ಘಟನೆ ಬಳಿಕ ಬಸ್​​​​​​ ಚಾಲಕ ನಿಲುಗಡೆ ಮಾಡದೆ ಲಿಂಗಸುಗೂರಿನತ್ತ ಸಂಚರಿಸಿದ್ದ. ಬಸ್ ಹಿಂಬಾಲಿಸಿಕೊಂಡು ಹೋಗಿದ್ದ PSI ಸಿದ್ದರಾಮ‌ ಬಿದರಾಣಿ ಅವರು ಬಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮೋಹನ್ ಲಾಲ್ ಬಳಿಯಿದ್ದ ಆನೆ ದಂತ ಪ್ರಕರಣ: ನಟನಿಗೆ ಕೋರ್ಟ್‌ನಲ್ಲಿ ಭಾರೀ ಹಿನ್ನಡೆ

ಮುಂದಿನ ಸುದ್ದಿ
Show comments