Publish Date: Mon, 04 Oct 2021 (21:17 IST)
Updated Date: Mon, 04 Oct 2021 (21:20 IST)
ಮನೆ ಮುಂದೆ ನಿಲ್ಲಿಸಿದ್ದ ಬೈಕ್‍ಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ನಾಲ್ವರನ್ನು ಮಾಗಡಿ ರಸ್ತೆ ಠಾಣೆ ಪೆÇಲೀಸರು ಬಂಧಿಸಿದ್ದಾರೆ.
ಸಯ್ಯದ್ ವಾಜಿದ್ (24), ಸಂತೋಷ್ (21), ಸಾದಿಕ್ ಪಾಷಾ (25), ಸುದೀಪ್ (21) ಬಂಧಿತರು. ಆರೋಪಿಗಳಿಂದ ಆರು ಲಕ್ಷ ರೂ. ಮೌಲ್ಯದ ಎಂಟು ದ್ವಿಚಕ್ರ ವಾಹನಗಳು, 6 ಮೊಬೈಲ್‍ಗಳು, 15 ಬ್ಯಾಟರಿಗಳು ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು.
ಮಾಗಡಿ ರಸ್ತೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೆ. 12ರಂದು ಮನೆ ಮುಂದೆ ನಿಲ್ಲಿಸಿರುವ ಪಲ್ಸರ್ ಬೈಕ್ ಕಳವಾಗಿರುವ ಬಗ್ಗೆ ಮಾಲೀಕರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಪೆÇಲೀಸರು, ಸೆ. 26 ರಂದು ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಈ ವೇಳೆ ಮಾಗಡಿ ರಸ್ತೆ, ವಿಜಯನಗರ, ಜ್ಞಾನಭಾರತಿ ಪೆÇಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು.