ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ

Webdunia
ಭಾನುವಾರ, 28 ನವೆಂಬರ್ 2021 (21:12 IST)
ವೇಗವಾಗಿ ಬಂದ ಕೆಎಸ್‍ಆರ್‍ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಿಗೇಹಳ್ಳಿ ವೃತ್ತದ ಬಳಿ ಭಾನುವಾರ ನಡೆದಿದೆ. 
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದೊಡ್ಡಬಳ್ಳಾಪುರದ ಹರಳುಮಲ್ಲಿಗೆಯ ಕಿರಣ್ (26) ಮೃತಪಟ್ಟವರು. 
ಕೊಡಿಗೇಹಳ್ಳಿ ಜಂಕ್ಷನ್ ಕಡೆಯಿಂದ ಬ್ಯಾಟರಾಯನಪುರ ಕಡೆಗೆ ಹೋಗಲು ಬಳ್ಳಾರಿ ರಸ್ತೆಯಲ್ಲಿ ಹೋಗುತ್ತಿದ್ದಾಗ ಸ್ವಾತಿ ಹೋಟೆಲ್ ಮುಂಭಾಗ ಹಿಂದಿನಿಂದ ಬಂದ ಕೆಎಸ್‍ಆರ್‍ಟಿಸಿ ಬಸ್ ಬೈಕ್‍ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರನ ತಲೆ ಮೇಲೆ ಬಸ್ ಚಕ್ರ ಹರಿದು ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಹಾಗೂ ನಿರ್ವಾಹಕ ಪರಾರಿಯಾಗಿದ್ದಾರೆ. 
ಸ್ಥಳಕ್ಕೆ ದೌಡಾಯಿಸಿದ ಹೆಬ್ಬಾಳ ಸಂಚಾರ ಠಾಣೆ ಪೆÇಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಚಾಲಕ ಹಾಗೂ ನಿರ್ವಾಹಕನ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಡಿಸಿಪಿ ಸವಿತಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments