ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಕೆಆರ್ ಪುರಂ ಶಾಸಕ ಬೈರತಿ ಬಸವರಾಜ್ ತಲೆಮರೆಸಿಕೊಂಡ್ರಾ ಎಂಬ ಪ್ರಶ್ನೆ ಮೂಡಿದೆ.
ಬಿಕ್ಲು ಶಿವು ಪ್ರಕರಣದಲ್ಲಿ ಮೊನ್ನೆಯಷ್ಟೇ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಶಾಸಕರಿಗಾಗಿ ಹುಡುಕಾಟ ಆರಂಭಿಸಿದೆ. ಯಾವುದೇ ಕ್ಷಣದಲ್ಲಿ ಅವರ ಬಂಧನ ಸಾಧ್ಯತೆಯಿದೆ.
ಆದರೆ ಶಾಸಕರು ಈಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು ಸಂಪರ್ಕಕ್ಕೆ ಸಿಗುತ್ತಿಲ್ಲ ಎನ್ನಲಾಗಿದೆ. ಬಂಧನ ಭೀತಿಯಲ್ಲಿ ಅವರು ಈಗ ಅಜ್ಞಾತ ಸ್ಥಳಕ್ಕೆ ತೆರಳಿರುವ ಶಂಕೆಯಿದೆ. ಇತ್ತ ಪೊಲೀಸರು ಅವರಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ.
ಈಗಾಗಲೇ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿರುವ ಬಿಜೆಪಿ ಶಾಸಕ ನನಗೂ ಪ್ರಕರಣಕ್ಕೂ ಸಂಬಂಧವಿಲ್ಲ ಎಂದಿದ್ದರು. ಆದರೆ ಎಫ್ಐಆರ್ ನಲ್ಲಿ ಬೈರತಿ ಬಸವರಾಜ್ ಹೆಸರೂ ಉಲ್ಲೇಖವಾಗಿದೆ.