Publish Date: Sun, 01 Jan 2023 (08:40 IST)
Updated Date: Sun, 01 Jan 2023 (10:14 IST)
ಬೆಂಗಳೂರು : ಹೊಸ ವರ್ಷವನ್ನು ಇಡೀ ದೇಶವೇ ಸಂಭ್ರಮಿಸುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಂತೂ ನ್ಯೂ ಇಯರ್ಗೆ ಗ್ರ್ಯಾಂಡ್ ವೆಲ್ಕಂ ಸಿಕ್ಕಿದೆ.
ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದ ಮೈಸೂರು ಅರಮನೆಯಲ್ಲಿ ಪಟಾಕಿ ಸಿಡಿಸಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಕೊರೊನಾದಿಂದಾಗಿ ಕಳೆದೆರಡು ವರ್ಷಗಳಿಂದ ಡಲ್ ಹೊಡೆದಿದ್ದ ಹೊಸ ವರ್ಷಾಚರಣೆ ಈ ಬಾರಿ ಗ್ರ್ಯಾಂಡ್ ಆಗಿ ಜರುಗಿದೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ನಲ್ಲಂತೂ ಜನಸಾಗರವೇ ಸೇರಿದೆ.
ಹಾಡು, ಕುಣಿತ, ಡ್ಯಾನ್ಸ್, ಮಸ್ತಿ ಮಾಡಿ, ಪಟಾಕಿ ಸಿಡಿಸಿ ಹೊಸ ವರ್ಷವನ್ನು ಬರಮಾಡಿಕೊಂಡರು. ಬಾರ್, ಪಬ್, ಕ್ಲಬ್ಗಳಲ್ಲಿ ಸೇರಿದ್ದ ಪಾರ್ಟಿ ಪ್ರಿಯರು ಸಖತ್ ಎಂಜಾಯ್ ಮಾಡಿದರು.