Publish Date: Mon, 19 Jun 2023 (15:39 IST)
Updated Date: Mon, 19 Jun 2023 (13:41 IST)
ಮುಂಗಾರು ಮಳೆ ಇಂದು ಚುರುಕಾಗುವ ಸಾಧ್ಯತೆ ಇದೆ.ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು,ಸಿಲಿಕಾನ್ ಸಿಟಿ ಸೇರಿ , ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ಸಂಜೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು,ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ.ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ.ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ.ಎರಡು ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30 ರಿಂದ 40 ಕಿಲೋ ಮೀಟರ್ ವೇಗ ಬೀಸಲಿದೆ.ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಮಾನ್ಯ ಉಷ್ಣಾಂಶಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಿರುತ್ತೆ.ಬಿಪರ್ ಜಾಯ್ ಚಂಡಮಾರುತದ ಕಾರಣ ಭಾರಿ ಅಲೆಗಳು ಉಂಟಾಗುವ ಸಾಧ್ಯತೆ ಇದೆ.ಇಂದು ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.