Select Your Language

Notifications

webdunia
webdunia
webdunia
webdunia

ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ:ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲು

ಬಿಪಿನ್ ರಾವತ್ ಸಾವಿನ ಸಂಭ್ರಮಾಚರಣೆ:ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲು
bangalore , ಸೋಮವಾರ, 13 ಡಿಸೆಂಬರ್ 2021 (19:55 IST)
ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನೆಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ಯೋಧರ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಮೂರು ಮಂದಿಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಓರ್ವ ಬೆಂಗಳೂರು, ಇನ್ನೋರ್ವ ಕಾರ್ಕಳ ಹಾಗೂ ಮತ್ತೋರ್ವ ಮಂಗಳೂರು ಮೂಲದವರು. ಫೇಸ್‌ಬುಕ್ ಖಾತೆಗಳು ಅಸಲಿಯೇ ಅಥವಾ ನಕಲಿಯೆ? ಎಲ್ಲಿಂದ ಈ ಖಾತೆಗಳನ್ನು ತೆರೆಯಲಾಗಿದೆ? ಎಂಬಿತ್ಯಾದಿ ವಿಚಾರಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ವಸಂತ್ ಕುಮಾರ್ ಟಿ.ಕೆ ಎಂಬ ಫೇಸ್‌ಬುಕ್ ಖಾತೆಯಿಂದ ಮತ್ತು ಸುಬ್ಬರಾವ್ ರವಿಕುಮಾರ್ ಎಂಬ ಹೆಸರಿನ ಫೇಸ್‌ಬುಕ್‌ಖಾತೆಯಿಂದ ಜನರಲ್ ಬಿಪಿನ್ ರಾವತ್ ಅವರ ಕುರಿತು ಹಾಗೂ ಶ್ರೀನಿವಾಸ ಕಾರ್ಕಳ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿದೆ.ಆರೋಪಿಗಳು ಜಾಲತಾಣಗಳಲ್ಲಿ ಬಿಪಿನ್ ರಾವತ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಬಗ್ಗೆಯೂ ಸಾಕಷ್ಟು ಪ್ರಚೋದನಕಾರಿ ಪೋಸ್ಟ್ ಹಾಕಿರುವುದು ಪತ್ತೆಯಾಗಿದೆ. ಈ ಬಗ್ಗೆ ಸುಶಾಂತ್ ಎಂಬವರು ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ ಎಂದು ಶಶಿಕುಮಾರ್ ತಿಳಿಸಿದರು.
ಅವಮಾನ ಮಾಡುವಂತಹ ಹೇಳಿಕೆಗಳು ಜನಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಹಾಗೂ ಅಪಾಯದ ಭೀತಿಯನ್ನು ಹುಟ್ಟಿಸುವ ಉದ್ದೇಶವಿದೆ. ಆರೋಪಿಗಳನ್ನು ಶೀಘ್ರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದವರು ಸ್ಪಷ್ಟಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶೀಘ್ರ 15 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಬಿ.ಸಿ. ನಾಗೇಶ್