ಕೇರಳದ ಕೊಟ್ಟಾಯಂನಲ್ಲಿ ಮತ್ತೆ ಹಕ್ಕಿ ಜ್ವರ: ಇಂದಿನಿಂದ ಹಕ್ಕಿಗಳ ಸಾಮೂಹಿಕ ದಹನ

Webdunia
ಬುಧವಾರ, 15 ಡಿಸೆಂಬರ್ 2021 (14:00 IST)
ಕೇರಳದ ಕೊಟ್ಟಾಯಂನಲ್ಲಿ ಮತ್ತೆ ಹಕ್ಕಿ ಜ್ವರ ಆತಂಕ ಎದುರಾಗಿದೆ.
ಈಗಾಗಲೇ ಮೂರು ಹಕ್ಕಿ ಜ್ವರ ಪ್ರಕರಣ ಪತ್ತೆಯಾಗಿದ್ದು, ಇಂದಿನಿಂದ ಸಾಮೂಹಿಕವಾಗಿ ಹಕ್ಕಿಗಳನ್ನು ಕೊಲ್ಲುವ ಪ್ರಕ್ರಿಯೆ ಆರಂಭವಾಗಲಿದೆ. ವೇಚರ್,ಅಯ್ಮಾನಂ ಮತ್ತು ಕಲ್ಲಾರಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ.
ಪಶು ಸಂಗೋಪನಾ ಇಲಾಖೆಯ 10 ಕ್ಷಿಪ್ರ ಪ್ರಕ್ರಿಯಾ ತಂಡಗಳು ಸೇರಿ ಹಕ್ಕಿಗಳನ್ನು ಕೊಲ್ಲಲಿವೆ.
ನಿಯಂತ್ರಣದಲ್ಲಿ ಇಡದಿದ್ದರೆ ಹಕ್ಕಿಜ್ವರ ವೇಗವಾಗಿ ಹರಡಲಿದ್ದು, ಮಾಹಿತಿ ಅನ್ವಯ 28-35 ಸಾವಿರ ಹಕ್ಕಿಗಳನ್ನು ಕೊಲ್ಲಬೇಕಿದೆ. ನಿಯಂತ್ರಣ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾಧಿಕಾರಿ ಡಾ.ಪಿ.ಕೆ. ಜಯಶ್ರೀ ಅವರು ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.
ಭೋಪಾಲ್‌ನ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‌ನಲ್ಲಿ ಪರೀಕ್ಷೆ ನಡೆಸಿದ್ದು, ಹಕ್ಕಿಗಳಲ್ಲಿ ಜ್ವರ ಇರುವುದು ಪತ್ತೆಯಾಗಿದೆ. ಈ ಮೊದಲು ಆಲಪ್ಪುಳದಲ್ಲಿ ಪ್ರಕರಣಗಳು ಕಾಣಿಸಿದ್ದು, ಪಕ್ಷಿಗಳು, ಬಾತುಕೋಳಿಗಳನ್ನು ಕೊಲ್ಲಲಾಗಿತ್ತು. ಇದರಿಂದಾಗಿ ಕೋಳಿ ಸಾಕಣಿಕೆಯಲ್ಲಿ ತೊಡಗಿರುವವರಿಗೆ ಅಪಾರ ನಷ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಮುಂದಿನ ಸುದ್ದಿ
Show comments