Select Your Language

Notifications

webdunia
webdunia
webdunia
webdunia

80 Kg ಕೇಕ್​ ಕತ್ತರಿಸಿ ಬರ್ತ್​​​​​​ಡೇ ಸಂಭ್ರಮ

Birthday celebration by cutting 80 Kg cake
ಶಿವಮೊಗ್ಗ , ಸೋಮವಾರ, 27 ಫೆಬ್ರವರಿ 2023 (17:28 IST)
ಮಾಜಿ ಸಿಎಂ B.S.ಯಡಿಯೂರಪ್ಪ ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆದರೆ, ಪಕ್ಷದ ಕಾರ್ಯಕರ್ತರ ಹಾಗೂ ಅಭಿಮಾನಿಗಳು ಒತ್ತಾಯಕ್ಕೆ ಮಣಿದು ನಿನ್ನೆ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಶಿವಮೊಗ್ಗ ವಿನೋಬನಗರದ ತಮ್ಮ ನಿವಾಸದಲ್ಲಿ ಭದ್ರಾವತಿ ತಾಲೂಕಿನ ಕಾರ್ಯಕರ್ತರು ತಂದಿದ್ದ 80 ಕೆಜಿ ತೂಕದ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅಭಿಮಾನಿಗಳ ಒತ್ತಾಯಕ್ಕೆ‌ ಮಣಿದು ಯಡಿಯೂರಪ್ಪ ಕೇಕ್ ಕತ್ತರಿಸಿದರು. ಈ ವೇಳೆ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಗೃಹ ಸಚಿವ ಆರಗ ಜ್ಞಾನೇಂದ್ರ,‌ ಸಂಸದ B.Y. ರಾಘವೇಂದ್ರ, BJP ರಾಜ್ಯ ಉಪಾಧ್ಯಕ್ಷರಾದ B.Y. ವಿಜಯೇಂದ್ರ ಸೇರಿದಂತೆ ಇತರ ಮುಖಂಡರು ಹಾಜರಿದ್ದರು. ಇನ್ನು ವಿವಿಧ ಸಂಘಟನೆಯ ಮುಖಂಡರು ಸೇರಿದಂತೆ ಪಕ್ಷದ ಕಾರ್ಯಕರ್ತರು B.S. ಯಡಿಯೂರಪ್ಪ ಅವರಿಗೆ ಜನುಮದಿನದ ಶುಭಾಶಯ ಕೋರಿ ಸನ್ಮಾನಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೋದಿ ಆಗಮನಕ್ಕೆ ಕುಂದಾನಗರಿ ಸಜ್ಜು