Publish Date: Fri, 19 Nov 2021 (20:34 IST)
Updated Date: Fri, 19 Nov 2021 (20:39 IST)
ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಪ್ರಧಾನಿ ಮೋದಿಯವರು ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿ, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿ ಮತ್ತು ದಾಖಲೆ ಯಾವುದೇ ಪಕ್ಷದವರು ಕೊಟ್ಟರೂ ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದರು.
ಕಾಂಗ್ರೆಸ್ ನಲ್ಲಿ ಎರಡು ಬಣಗಳು ಇರುವುದು ಜಗಜ್ಜಾಹೀರು. ವಿರೋಧ ಪಕ್ಷದವರ ವಿರುದ್ಧ ಹೇಳಿಕೆ ನೀಡುವುದಿಲ್ಲ ಎಂದರು. ಬೆಳೆ ಹಾನಿಯ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಅಧಿಕಾರಿಗಳಿಗೆ ಸಮೀಕ್ಷೆ ಮಾಡಲು ತಿಳಿಸಿದ್ದಾರೆ. ಎಲ್ಲಿ ಬೆಳೆನಾಶವಾಗಿದೆಯೋ ಅಲ್ಲಿ ಪರಿಹಾರ ಕೊಡುವ ಕ್ರಮಕೈಗೊಳ್ಳುತ್ತಾರೆ ಎಂದಿದ್ದಾರೆ.