Publish Date: Sun, 31 May 2026 (17:40 IST)
Updated Date: Sun, 31 May 2026 (17:43 IST)
ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್‌ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದ್ದು, ನಾಳೆ (ಜೂ.1) ಸೋಮವಾರದಂದೇ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದೆ.
ಶ್ರೀಕಿ, ನಲಪಾಡ್ ಮನೆ ಮೇಲೆ ದಾಳಿ ನಡೆಸಿದ್ದ ಇಡಿ ಪರಿಶೀಲನೆ ನಡೆಸಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಇಡಿ ಅಧಿಕಾರಿಗಳು ಶ್ರೀಕಿ, ಸುನೇಶ್ ಹೆಗ್ಡೆ, ರಾಬಿನ್ ಖಂಡೇವಾಲ ಅವರನ್ನ ಬಂಧಿಸಿದೆ.
ಬಿಟ್ ಕಾಯಿನ್ ಕೇಸ್ ಸಂಬಂಧ ಕೈ ನಾಯಕ ಮೊಹಮ್ಮದ್ ನಲಪಾಡ್ ಅವರಿಗೆ ಇಡಿ ಎರಡನೇ ಬಾರಿ ನೋಟಿಸ್ ಅನ್ನು ನೀಡಿದೆ.
ರಾಜಕೀಯ ಕಾರ್ಯಕ್ರಮ ಹಿನ್ನೆಲೆ ಮೊದಲ ನೋಟಿಸ್ಗೆ ನಲಪಾಡ್ ಹಾಜರಾಗಿರಲಿಲ್ಲ. ಕಾರಣ ತಿಳಿಸಿ ಇಡಿಗೆ ಮನವಿ ಮಾಡಿದ್ದರು. ಇದೀಗ ಎರಡನೇ ಬಾರಿ ಇಡಿ ನೋಟಿಸ್ ಜಾರಿ ಮಾಡಿದ್ದುಮ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ