ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಮರುಜೀವ ಸಿಕ್ಕಂತಾಗಿದೆ. ಅಧಿಕೃತವಾಗಿ ಚಾಲನೆಗೆ ಬಂದಿದ್ದು, ಮರು ತನಿಖೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದ ಡಿಜಿ&ಐಜಿ ಅಲೋಕ್ ಮೋಹನ್ ಪ್ರಕರಣದ ಸಾರಾಂಶ ತಿಳಿಸಿದ್ದಾರೆ. ಈ ಮೂಲಕ ಪ್ರಕರಣದ ಮರು ತನಿಖೆಗೆ ಮುಂದಾಗಿದೆ ಕಾಂಗ್ರೆಸ್ ಸರ್ಕಾರ.
ಪ್ರಕರಣದ ಮೊದಲ ಹಂತವಾಗಿ ನಗರ ಪೊಲೀಸ್ ಆಯುಕ್ತ ದಯಾನಂದ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ.
ಇದಾದ ಬಳಿಕ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಯಾವ ತನಿಖಾ ಸಂಸ್ಥೆಗೆ ತನಿಖೆಗೆ ನೀಡಬೇಕೆಂದು ತೀರ್ಮಾನ ಮಾಡಲಿರೋ ಸರ್ಕಾರ ಸಿಐಡಿಯಿಂದಲಾ? ಎಸ್ಐಟಿ ಇಂದಲಾ ತನಿಖೆ? ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸಲಿದೆ.