ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

Sampriya
ಭಾನುವಾರ, 7 ಡಿಸೆಂಬರ್ 2025 (11:12 IST)
ಬೆಂಗಳೂರು: ಕರ್ನಾಟಕದ ರಾಜ್ಯದಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.  ಬೆಂಗಳೂರಿನ ಹಲವೆಡೆ ಬೆಳಗಿನ ಜಾವದಲ್ಲಿ ದಟ್ಟ ಮಂಜು ಕವಿದ ವಾತಾವರಣ ಇರಲಿದೆ.

ಡಿ.7ರಿಂದ 12ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಇಂದೂ ಮಂಜು ಮುಸುಕಿದ ವಾತಾವರಣ ಇರಲಿದ್ದು, ಇನ್ನೆರಡು ದಿನ ವಿಪರೀತ ಚಳಿ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಬೀದರ್‌ನಲ್ಲಿ ಶನಿವಾರ ಬೆಳಗ್ಗೆ ಅತಿ ಕನಿಷ್ಠ ತಾಪಮಾನ 13.5 ಸೆಲ್ಸಿಯಸ್‌ ದಾಖಲಾಗಿದೆ. ಇನ್ನು ದಕ್ಷಿಣ ಕೇರಳ ಕರಾವಳಿ ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟಕ್ಕಿಂತ 0.9 ಕಿ.ಮೀ. ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸದ್ಯ ಒಣ ಹವೆಯಿರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 11 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಮುಂದಿನ ಸುದ್ದಿ
Show comments