Webdunia - Bharat's app for daily news and videos

Install App

ಬಿಜೆಪಿ 254 ಕೋಟಿ ರೂಪಾಯಿ ಹಗರಣ

Webdunia
ಗುರುವಾರ, 23 ಜೂನ್ 2022 (19:36 IST)
ರಾಜ್ಯ ವಿಧಾನಮಂಡಲದಲ್ಲಿ ಕಾಗದ ರಹಿತ ಆಡಳಿತ ವ್ಯವಸ್ಥೆ ತರುವ ಉದ್ದೇಶದ ಇ-ವಿಧಾನ್ ಯೋಜನೆ ಹೆಸರಲ್ಲಿ ಅಧಿಕಾರಿಗಳು 254 ಕೋಟಿ ರೂಪಾಯಿ ಹಗರಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್  ವಕ್ತಾರ ರಮೇಶ್ ಬಾಬು  ಆರೋಪಿಸಿದ್ದಾರೆ. ಈ ಕೂರಿತು ಕೆಪಿಸಿಸಿ ಕಚೇರಿಯಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳ ಮಟ್ಟದಲ್ಲಿ 254 ಕೋಟಿ ಮೊತ್ತದ ಹಗರಣ ಮಾಡಲು ಮುಂದಾಗಿದ್ದು, ಈ ಕುರಿತು ಮೇ 5 ಹಾಗೂ 7 ರಂದು ವಿಧಾನಸಭೆ ಸ್ಪೀಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದೆ. ನಂತರ ಸ್ಪೀಕರ್ ಅರನ್ನು ಭೇಟಿ ಮಾಡಿಯೂ ಈ ವಿಚಾರವಾಗಿ ಮನವಿ ಮಾಡಿದ್ದೆ. ಸ್ಪೀಕರ್ ಆದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭೆಯ ಮುಖ್ಯಸ್ಥರಾಗಿ ಸದನದ ಹಣವನ್ನು ಕಾಪಾಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಸಾರ್ವಜನಿಕರ ವಿರೋಧದ ನಡುವೆಯೂ ಇ ಅಧಿಕಾರಿಗಳು ವಿಧಾನಸಭೆಯ ಸಚಿವಾಲಯಗಳಲ್ಲಿ ಕಾಗದ ರಹಿತ ವ್ಯವಸ್ಥೆಯನ್ನು ತರುವ ಜವಾಬ್ದಾರಿಯನ್ನು ಕಿಯೋನಿಕ್ಸ್ ಎಂಬ ಖಾಸಗಿ ಕಂಪನಿಗೆ ನೀಡುವ ಮೂಲಕ ತಮ್ಮ ಜೇಬು ತುಂಬಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. 2017-18ರಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಆಯವ್ಯಯದಲ್ಲಿ ಕರ್ನಾಟಕ ವಿಧಾನಮಂಡಲದಲ್ಲಿ ನಗದು ರಹಿತ ಯೋಜನೆಯ ಇ-ವಿಧಾನ ಕಾರ್ಯಕ್ರಮ ಜಾರಿಗೊಳಿಸಲು ಪ್ರಾಥಮಿಕವಾಗಿ ಮೂಲಭೂತ ಸೌಕರ್ಯಗಳಿಗೆ 20 ಕೋಟಿ ರೂಪಾಯಿಗಳ ಬಿಡುಗಡೆ ಮತ್ತು ಈ ಯೋಜನೆಗೆ 250 ಕೋಟಿಗಳ ಅನುದಾನ ಘೋಷಣೆ ಮಾಡಿತ್ತು.ಆದ್ರೆ ಈ ಬಿಜೆಪಿ ಸರ್ಕಾರ ಖಾಸಗಿ ಕಂಪನಿಗೆ ಕೊಟ್ಟು ಜೇಜುತುಂಬಿಸುವ ಕೆಲಸ ಮಾಡುತ್ತಿದೆ. ಆದ್ದರಿಂದ  ವಿಧಾನಸಭೆಯ ಸಭಾಧ್ಯಕ್ಷರಿಗೆ ಪತ್ರ ಬರೆದು ಸಾರ್ವಜನಿಕ ಹಿತದೃಷ್ಟಿಯಿಂದ 254 ಕೋಟಿಯ ಯೋಜನೆಯನ್ನು ಖಾಸಗಿಯವರಿಗೆ ನೀಡದಂತೆ ಮನವಿ ಮಾಡಲಾಗಿದೆ. ಸ್ಪೀಕರ್ ಅವರು ಅಧಿಕಾರಿಗಳ ತಪ್ಪು ಮಾಹಿತಿಯಿಂದ ದಾರಿ ತಪ್ಪಬಾರದು, ಕೇಂದ್ರದ ಮೇವಾ ಯೋಜನೆ ಜಾರಿ ಮಾಡಲಿ. ಸಾರ್ವಜನಿಕರ ಹಣ ಸಂರಕ್ಷಣೆಗೆ ಮುಂದಾಗಬೇಕು ಎಂದು ಕಾಂಗ್ರೆಸ್ ಒತ್ತಾಯಿಸುತ್ತದೆ. ಸ್ಪೀಕರ್ ಅವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಈ ವಿಚಾರವಾಗಿ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments