Webdunia - Bharat's app for daily news and videos

Install App

ನಾಗಮಂಗಲ ಗಲಭೆಯಲ್ಲಿ ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯರು: ಬಿಜೆಪಿ ಗಂಭೀರ ಆರೋಪ

Krishnaveni K
ಸೋಮವಾರ, 16 ಸೆಪ್ಟಂಬರ್ 2024 (08:57 IST)
ಮಂಡ್ಯ: ಇತ್ತೀಚೆಗೆ ಮಂಡ್ಯದ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮಾಡುತ್ತಿದ್ದ ಹಿಂದೂಗಳ ಮೇಲೆ ದಾಳಿ ನಡೆಸಿದವರಲ್ಲಿ ಕೇರಳದ ನಿಷೇಧಿತ ಪಿಎಫ್ಐ ಸಂಘಟನೆಯ ಇಬ್ಬರು ಸೇರಿದ್ದಾರೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮಾಡುತ್ತಿದ್ದವರ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿದು ದಾಂಧಲೆ ನಡೆಸಿದ್ದರು. ಕೇವಲ 10 ನಿಮಿಷದಲ್ಲಿ ಇವರ ಕೈಗೆ ಪೆಟ್ರೋಲ್ ಬಾಂಬ್, ತಲ್ವಾರ್ ಹೇಗೆ ಬಂತು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಕೂಡಾ ಪ್ರಶ್ನೆ ಮಾಡಿದ್ದರು.

ಪ್ರಕರಣದ ಬಗ್ಗೆ 50 ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಎಫ್ಐಆರ್ ನಲ್ಲಿ ಅಮಾಯಕರ ಹೆಸರು ಸೇರ್ಪಡೆಯಾಗಿದೆ ಎಂದು ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಚಿವ ಚೆಲುವರಾಯಸ್ವಾಮಿ ಅಮಾಯಕರ ಹೆಸರು ಕೈ ಬಿಡಲು ಸೂಚಿಸಿದ್ದರು. ಆದರೆ ಈ ಹೆಸರುಗಳ ಪೈಕಿ ನಾಸಿರ್ ಮತ್ತು ಯೂಸಫ್ ಎಂಬವರಿದ್ದು, ಇವರು ಕೇರಳ ಮೂಲದ ಪಿಎಫ್ಐ ಸಂಘಟನೆಯ ಕಾರ್ಯಕರ್ತರು ಎಂದು ಬಿಜೆಪಿ ಆರೋಪಿಸಿದೆ.

ಕೇರಳದ ನಿಷೇಧಿತ ಸಂಘಟನೆಯ ಸದಸ್ಯರಿಗೆ ಕರ್ನಾಟಕದ ಮಂಡ್ಯದಲ್ಲೇನು ಕೆಲಸ? ಇದು ಪೂರ್ವನಿಯೋಜಿತ ಕೃತ್ಯ. ಹಳೇ ಮೈಸೂರು ಭಾಗದಲ್ಲಿ ಕನ್ನಡಿಗರ ಶಾಂತಿ ಕದಡಲು ಮಾಡಿದ ದೊಡ್ಡದೊಂದು ಷಡ್ಯಂತ್ರ ರೂಪುಗೊಂಡಿರುವುದು ನಾಗಮಂಗಲದಲ್ಲಿ ನಡೆದ ಘಟನೆಯಿಂದ ಸಾಬೀತಾಗಿದೆ. ನಾಗಮಂಗಲ ಗಲಭೆಯನ್ನು ಎನ್ಐಎಗೆ ವಹಿಸಿದರೆ ಮಾತ್ರ ಕರ್ನಾಟಕದಲ್ಲಿ ಮುಂದಾಗುವ ಅನಾಹುತಗಳನ್ನು ತಪ್ಪಿಸಬಹುದು ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments