ಅಪ್ರಾಪ್ತ ಬಾಲಕಿಯ ಮೇಲೆ ಬಿಜೆಪಿ ಕಾರ್ಯಕರ್ತನಿಂದ ನಿರಂತರ ಅತ್ಯಾಚಾರ

Webdunia
ಬುಧವಾರ, 10 ಏಪ್ರಿಲ್ 2019 (15:27 IST)
ಬಳ್ಳಾರಿ : 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಬಿಜೆಪಿ ಕಾರ್ಯಕರ್ತನೊಬ್ಬ ನಿರಂತರ ಅತ್ಯಾಚಾರ ಮಾಡಿರುವ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಗೇನಹಳ್ಳಿ ನಿವಾಸಿ ಚಂದ್ರಶೇಖರ್ (60) ಅತ್ಯಾಚಾರ ಎಸಗಿದ ಬಿಜೆಪಿ ಕಾರ್ಯಕರ್ತನಾಗಿದ್ದು, ಈತ ಸಂತ್ರಸ್ತೆ ಪೋಷಕರ ಅಂಗಡಿಯಿಂದ ಆಗಾಗ ಟೀ ಕುಡಿಯಲು ಹೋಗುತ್ತಿದ್ದನು. ಅಷ್ಟೇ ಅಲ್ಲದೇ ಬಾಲಕಿಯಿಂದ ಟೀ ಮತ್ತು ಇತರೆ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದನು. ಆ ವೇಳೆ ಬಾಲಕಿಗೆ ದುಡ್ಡಿನ ಆಮಿಷವೊಡ್ಡಿ ಆರೋಪಿ ಚಂದ್ರಶೇಖರ್ ನಿರಂತರ ಅತ್ಯಾಚಾರ ಎಸಗಿದ್ದಾನೆ.

 

ಸಂತ್ರಸ್ತೆಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಆಕೆಯನ್ನು ವೈದ್ಯರ ಬಳಿ ಪರೀಕ್ಷಿಸಿದಾಗ ಆಕೆ ಗರ್ಭಿಣಿಯಾದ ವಿಚಾರ ತಿಳಿದುಬಂದಿದೆ. ನಂತರ ಬಾಲಕಿಯನ್ನು ವಿಚಾರಿಸಿದಾಗ ಆಕೆ ಈ ಘಟನೆಯ ಬಗ್ಗೆ ತಿಳಿಸಿದ್ದಾಳೆ.

 

ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಆರೋಪಿ ಚಂದ್ರಶೇಖರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‍.ಐ.ಆರ್ ದಾಖಲಿಸಲಾಗಿದೆ. ಆದರೆ ಆರೋಪಿ ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments