Select Your Language

Notifications

webdunia
webdunia
webdunia
webdunia

ಬಿಜೆಪಿ ಕಾರ್ಯಕರ್ತೆ ಶಕುಂತಲಾ ಪುತ್ರ ಆತ್ಮಹತ್ಯೆ, ಡೆತ್‌ನೋಟ್‌ ಪತ್ತೆ

BJP Worker Shakuntala Nataraj Son, Trishal No More, BJP Leader Shakuntala Natraj,

Sampriya

ತುಮಕೂರು , ಶುಕ್ರವಾರ, 10 ಜನವರಿ 2025 (19:00 IST)
ತುಮಕೂರು: ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್  ಅವರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ.

ಮೃತ ಬಾಲಕನನ್ನು ತ್ರಿಶಾಲ್ (13) ಎಂದು ಗುರುತಿಸಲಾಗಿದೆ. ಮೃತ ಬಾಲಕ 7 ನೇ ತರಗತಿಯಲ್ಲಿ ಓದುತ್ತಿದ್ದ.

ತಾಯಿ ಶಕುಂತಲಾ ಜತೆ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿದ್ದ ಬಾಡಿಗೆ ಮನೆಯಲ್ಲಿ ತ್ರಿಶಾಲ್ ವಾಸವಿದ್ದ. ಬೆಳಗ್ಗಿನ ಸಮಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಮವಸ್ತ್ರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.


ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಡೆತ್ ನೋಟ್ ಇದೆ ಎನ್ನಲಾಗಿದ್ದು ಬಹಿರಂಗಗೊಂಡಿಲ್ಲ.

ಈ ಸಂಬಂಧ ಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

8ವರ್ಷದ ಬಾಲಕನಲ್ಲಿ HMPV ಸೋಂಕು ದೃಢ: ಗುಜರಾತ್‌ನಲ್ಲಿ ಪ್ರಕರಣಗಳ ಸಂಖ್ಯೆ 3ಕ್ಕೆ ಏರಿಕೆ