ನಟಿ ರಮ್ಯಾಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು!

Webdunia
ಗುರುವಾರ, 25 ಆಗಸ್ಟ್ 2016 (18:12 IST)
ಮಂಗಳೂರು ನಗರವನ್ನು ನರಕ ಎಂದು ಹೇಳಿಕೆ ನೀಡಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರ ಮೇಲೆ 25 ಕ್ಕೂ ಹೆಚ್ಚು ಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ವರದಿಯಾಗಿದೆ.
 
ಖಾಸಗಿ ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ನಟಿ ರಮ್ಯಾ ಮಂಗಳೂರು ನಗರವನ್ನು ನರಕ ಎಂದು ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳೂರು ನಗರದ ವಿಮಾನ ನಿಲ್ದಾಣದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ, ರಮ್ಯಾ ದೇಶ ಬಿಟ್ಟು ತೊಲಗಲಿ ಎಂದು ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.
 
ಪ್ರತಿಭಟನಾನಿರತ 25 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ ಪೊಲೀಸರು, ರಮ್ಯಾ ಅವರನ್ನು ಬೀಗಿ ಬಂದೋಬಸ್ತ್‌ನಲ್ಲಿ ನಗರದ ಗೋಲ್ಡ್ ಫಿಂಚ್ ಖಾಸಗಿ ಹೋಟೆಲ್‌ಗೆ ಕರೆದುಕೊಂಡು ಹೋದರು.
 
ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ಪಾಕಿಸ್ತಾನ ನರಕವಿದ್ದಂತೆ ಅಂತಾ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ನಟಿ ರಮ್ಯಾ ಅವರು ಪಾಕಿಸ್ತಾನದಲ್ಲಿ ಹಾಗೇನಿಲ್ಲ. ಅಲ್ಲಿನ ಜನರು ನಮ್ಮಂತೆ ಒಳ್ಳೆಯವರು ಅಂತಾ ಹೇಳುವ ಮೂಲಕ ಪಾಕಿಸ್ತಾನವನ್ನು ಹಾಡಿ ಹೊಗಳಿದ್ದು ಇತ್ತೀಚೆಗಷ್ಟೇ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments