Webdunia - Bharat's app for daily news and videos

Install App

ಅಲ್ಪಸಂಖ್ಯಾತರನ್ನೇ ಗುರಿಯಾಗಿಸಿ ಬಿಜೆಪಿ ಪ್ರತಿಭಟನೆ: ಸಿಎಂ ಕಿಡಿ

Webdunia
ಶನಿವಾರ, 3 ಡಿಸೆಂಬರ್ 2016 (13:42 IST)
ಟಿಪ್ಪು ಸುಲ್ತಾನ್ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಅರೆನಗ್ನ ಚಿತ್ರಗಳನ್ನು ವೀಕ್ಷಿಸಿದ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ರಾಜೀನಾಮೆ ನೀಡಬೇಕು ಎನ್ನುವ ಬಿಜೆಪಿ ಒತ್ತಡವನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸದಾ ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.
 
ವಿಧಾನಪರಿಷತ್‌ನಲ್ಲಿ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ಆರಂಭಿಸಿ ಕೂಡಲೇ ಸಚಿವ ತನ್ವೀರ್ ಅವರ ರಾಜೀನಾಮೆ ಪಡೆಯಬೇಕು ಎಂದು ಒತ್ತಾಯಿಸಿದರು.
 
ಬಿಜೆಪಿ ಸದಸ್ಯರ ಪ್ರತಿಭಟನೆಯಿಂದ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸದಾ ಅಲ್ಪಸಂಖ್ಯಾತರನ್ನು ಗುರಿಯಾಗಿಸುತ್ತಿದೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಾಗಿದೆ ಎಂದು ಕಿಡಿಕಾರಿದರು.
 
ಯಾವುದೇ ಕಾರಣಕ್ಕೂ ಸಚಿವ ತನ್ವೀರ್ ಸೇಠ್ ಅವರ ರಾಜೀನಾಮೆಯನ್ನು ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments