Select Your Language

Notifications

webdunia
webdunia
webdunia
webdunia

ಬಿಜೆಪಿ, ಓವೈಸಿಯಿಂದ ಕೋಮುಸೌಹಾರ್ದತೆಗೆ ಧಕ್ಕೆ: ದಿಗ್ವಿಜಯ್ ಸಿಂಗ್

ಬಿಜೆಪಿ, ಓವೈಸಿಯಿಂದ ಕೋಮುಸೌಹಾರ್ದತೆಗೆ ಧಕ್ಕೆ: ದಿಗ್ವಿಜಯ್ ಸಿಂಗ್
ಬೆಂಗಳೂರು , ಗುರುವಾರ, 27 ಅಕ್ಟೋಬರ್ 2016 (19:28 IST)
ಬಿಜೆಪಿ ಪಕ್ಷದ ಜೊತೆ ಸೇರಿ ಒವೈಸಿ ನೇತೃತ್ವದ ಎಐಎಂಐಎಂ ಹಾಗೂ ಎಸ್‌ಡಿಪಿಐ ಪಕ್ಷಗಳು ದೇಶದಲ್ಲಿ ಕೋಮು ಸೌಹಾರ್ದತೆಯನ್ನು ಕದಡುವಂತಹ ಕೆಲಸ ಮಾಡುತ್ತಿವೆ. ದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಕಾಂಗ್ರೆಸ್ ಕಾರ್ಯಕರ್ತರು ಬದ್ಧರಾಗಿರಬೇಕೆಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಕರೆ ನೀಡಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಾ.ಜಿ.ಪರಮೇಶ್ವರ್ ಅಭಿಂನದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಾ ಬಂದಿದೆ. ಇದಕ್ಕೆ ಎಐಎಂಐಎಂ ಹಾಗೂ ಎಸ್‌ಡಿಪಿಐ ಪಕ್ಷಗಳು ಕೈ ಜೋಡಿಸಿವೆ ಎಂದು ಗಂಭೀರವಾಗಿ ಆರೋಪಿಸಿದರು. 
 
ಸ್ವಾತಂತ್ರ್ಯ ಪೂರ್ವದಿಂದಲೂ ಕಾಂಗ್ರೆಸ್ ಜಾತ್ಯತೀತ ನಿಲುವಿನಲ್ಲಿ ನಂಬಿಕೆ ಇಟ್ಟುಕೊಂಡು ಬಂದಿದೆ. ಅದನ್ನು ನನ್ನ ಕಾರ್ಯಕರ್ತರು ಮುಂದುವರೆಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಉತ್ತಮ ಕೆಲಸಗಳನ್ನು ಮಾಡಿದೆ. ಆದರೆ, ಬಿಜೆಪಿ ಕೋಮು ಸೌಹಾರ್ದತೆಯನ್ನು ಕದಡುವ ಕೆಲಸ ಮಾಡುತ್ತಿದೆ. ಒಳ್ಳೆಯ ಕೆಲಸದ ಕುರಿತು ಮಾಧ್ಯಮಗಳು ಹೆಚ್ಚು ಪ್ರಚಾರ ಮಾಡಬೇಕು ಎಂದು ಅಭಿಪ್ರಾಯಪಟ್ಟರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಿಗಮ, ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟ 'ಮರಿ' ಗೌಡ