ಅನೈತಿಕ ರಾಜಕಾರಣಕ್ಕೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ನೇರ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರವಾಗಿ ಆರೋಪಿಸಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಮುಂದಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಶಾಸಕ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ 14 ಪಕ್ಷೇತರ ಶಾಸಕರು ರೆಸಾರ್ಟ್ ರಾಜಕಾರಣಕ್ಕೆ ತೆರಳಿರುವ ಕುರಿತು ನನಗೆ ಮಾಹಿತಿ ಇಲ್ಲ. ಚುನಾವಣೆ ಕುರಿತು ನಾವು ಯಾರೊಂದಿಗೂ ಚರ್ಚೆ ನಡೆಸಿಲ್ಲ ಎಂದು ಹೇಳಿದರು.
ಸೋಮಶೇಖರ ಅವರ ನೇತೃತ್ವದಲ್ಲಿ ಪಕ್ಷೇತರ ಶಾಸಕರು ರೆಸಾರ್ಟ್‌ಗೆ ತೆರಳಬಾರದಾ ಎಂದು ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಶಾಸಕರು ತಮ್ಮ ಪಕ್ಷಕ್ಕೆ ನಿಷ್ಠಿಯಿಂದಿದ್ದಾರೆ. ಅವರು ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ. ನಾವು ಸಹ ಯಾರಿಗೂ ಆಮಿಷ ಒಡ್ಡುವುದಿಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.