Select Your Language

Notifications

webdunia
webdunia
webdunia
webdunia

ಕಲ್ಲಪ್ಪ ಹಂಡಿಭಾಗ್‌ಗೆ ಬಿಜೆಪಿಯಿಂದ 5 ಲಕ್ಷ ರೂ ಪರಿಹಾರ,ಮನೆ ನಿರ್ಮಾಣದ ಭರವಸೆ

ಡಿವೈಎಸ್‌ಪಿ
ಬೆಳಗಾವಿ , ಮಂಗಳವಾರ, 19 ಜುಲೈ 2016 (17:58 IST)
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿರುವ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಬಿಜೆಪಿ ಪಕ್ಷದ ವತಿಯಿಂದ 5 ಲಕ್ಷ ರೂಪಾಯಿ ಪರಿಹಾರ ಧನ ಹಾಗೂ ಮನೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ.
 
ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಅವರ ನಿವಾಸಕ್ಕೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
 
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ, ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ದೊರೆಯುವವರೆಗೂ ಬಿಜೆಪಿ ಹೋರಾಟ ನಡೆಸುತ್ತದೆ. ಪಕ್ಷದ ವತಿಯಿಂದ ಕಲ್ಲಪ್ಪ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.
 
ನಿಷ್ಠಾವಂತ ಹಾಗೂ ಪ್ರಾಮಾಣಿಕ ಅಧಿಕಾರಿಗಳನ್ನು ರಾಜ್ಯ ಸರಕಾರ ಬಲಿ ಪಡೆಯುತ್ತಿದೆ. ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ಕೋರ್ಟ್‌ ಆದೇಶ ನೀಡಿದ ಮೇಲೆ ಕೆ.ಜೆ.ಜಾರ್ಜ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಮೊದಲೇ ರಾಜೀನಾಮೆ ನೀಡಿದ್ದರೆ ಅಧಿವೇಶನವನ್ನು ಸರಳವಾಗಿ ನಡೆಸಲು ಬಿಡುತ್ತಿದ್ದೇವು ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಅರುಣಾಚಲ ಪ್ರದೇಶ ಬಿಕ್ಕಟ್ಟಿಗೆ ಬಿಜೆಪಿ ಕಾರಣವಲ್ಲ: ರಾಜನಾಥ್ ಸಿಂಗ್