Select Your Language

Notifications

webdunia
webdunia
webdunia
webdunia

ಮಹಾದಾಯಿ ಸಮಸ್ಯೆಗೆ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ನಿರ್ಧಾರ ಪ್ರಕಟ?

ಮಹಾದಾಯಿ ಸಮಸ್ಯೆಗೆ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ನಿರ್ಧಾರ ಪ್ರಕಟ?
ಹುಬ್ಬಳ್ಳಿ , ಗುರುವಾರ, 21 ಡಿಸೆಂಬರ್ 2017 (08:29 IST)
ಕಳಸಾ ಬಂಡೂರಿ ಹಾಗೂ ಮಹದಾಯಿ ಯೋಜನೆ ಜಾರಿಯ ಕುರಿತು ಹುಬ್ಬಳ್ಳಿಯಲ್ಲಿ ನಡೆಯಲಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ, ರಾಜ್ಯ ಉಸ್ತುವಾರಿ ಮುರಳಿಧರರಾವ್, ಪ್ರಹ್ಲಾದ ಜೋಶಿ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಸೇರಿದಂತೆ ಇತರರು ಕಳಸಾ ಬಂಡೂರಿ ಯೋಜನೆ ಜಾರಿ‌ ಕುರಿತಂತೆ ಒಂದು ತಾಸು ಚರ್ಚೆ ನಡೆಸಿದ್ದಾರೆ.
ಹುಬ್ಬಳ್ಳಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಯೋಜನೆ ಜಾರಿಯ ಬಗ್ಗೆ ಪರಿವರ್ತನಾ ಯಾತ್ರೆ ಕಾದು ನೋಡಿ ಎಂದಿದ್ದಾರೆ.

ಕಳಸಾ ಬಂಡೂರಿ ನೀರಿನ ಸಮಸ್ಯೆ ಸದ್ಯದಲ್ಲಿಯೇ ಬಗೆಹರಿಯಲಿದೆ. ಸಭೆಯಲ್ಲಿ ಗೋವಾ ಸಿಎಂ ಮನೋಹರ್ ಪರಿಕ್ಕರ್ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. 7.56 ಟಿಎಂಸಿ ಕುಡಿಯುವ ನೀರಿಗಾಗಿ ಮನವಿ ಮಾಡಿದ್ದೇವೆ.‌ ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಪರಮೇಶ್ವರ್ ಅವರ 100 ಕ್ಷೇತ್ರಗಳ ಯಾತ್ರೆ ಇಂದಿನಿಂದ ಪ್ರಾರಂಭ