ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದೆ. ಡಿ ವಿ ಗುಂಡಪ್ಪನವರ ಮಂಕುತಿಮ್ಮನ ಕಗ್ಗದ ಸಾಲುಗಳನ್ನು ಉಲ್ಲೇಖಿಸಿ, ಬಾನೊಳಿರುವುದೆ ಪಕ್ಷಿ, ಪಾರ್ವ ದಾರಿಯ ನಕ್ಷೆ?, ಮೀನು ನೀರೊಳು ನುಸುಳೆ ಪಥನಿಯಮವಿಹುದೆ?, ಏನೊ ಜೀವನವನೆಳೆವುದೇನೊ ನೂಕುವುದದನು, ನೀನೊಂದು ಗಾಳಿಪಟ - ಮಂಕುತಿಮ್ಮ ಎಂಬುದಾಗಿ ಮಂಕು ತಿಮ್ಮನ ಕಗ್ಗವನ್ನು ಉಲ್ಲೇಖಿಸಿ, ಎಚ್‌ಡಿಕೆ ಎಂದರೆ ಗಾಳಿಪಟ, ಸ್ವಂತಿಕೆ ಇಲ್ಲದ ರಾಜಕಾರಣಿ ಎಂಬುದಾಗಿ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಕರ್ನಾಟಕ ಬಿಜೆಪಿಯು ಕುಮಾರಸ್ವಾಮಿಯವರೇ ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ. ನಿಮ್ಮಂತವರ ಯೂಟರ್ನ್ ನೀತಿಗಾಗಿಯೇ ಕಗ್ಗದಲ್ಲಿ ಸಾಲೊಂದು ರಚಿತವಾಗಿದೆ ಎಂದು ಟೀಕಿಸಿದೆ.