Publish Date: Wed, 21 Oct 2020 (14:39 IST)
Updated Date: Wed, 21 Oct 2020 (14:41 IST)
ಬೆಂಗಳೂರು : ಕೈ ಕಾರ್ಯಕರ್ತರ ಮೇಲೆ ಬಿಜೆಪಿ ಹಲ್ಲೆ ಆರೋಪದ ಹಿನ್ನಲೆಯಲ್ಲಿ ನಂದಿನಿ ಲೇಔಟ್ ಠಾಣೆ ಮುಂದೆ ಪ್ರತಿಭಟನೆ ಮಾಡುವುದರ ಮೂಲಕ ಬಿಜೆಪಿ ಕಾಂಗ್ರೆಸ್ ಕಾರ್ಯಕರ್ತರು ಹೈಡ್ರಾಮಾ ಮಾಡುತ್ತಿದ್ದಾರೆ.
ಸ್ಟೇಷನ್ ಎದುರು ನೂರಾರು ಕೈ ಕಾರ್ಯಕರ್ತರು ಜಮಾಯಿಸಿದ್ದಾರೆ. ಅದೇ ವೇಳೆ ಸ್ಟೇಷನ್ ಮುಂದೆ ಬಿಜೆಪಿ ಕಾರ್ಯಕರ್ತರು ಕೂಡ ಜಮಾಯಿಸಿದ್ದಾರೆ. ಉಭಯ ಪಕ್ಷದ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗುತ್ತಾ ಪ್ರತಭಟಿಸುತ್ತಿದ್ದಾರೆ. ಎರಡೂ ಪಕ್ಷದ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.