ಬಿಜೆಪಿಗರು- ಬ್ರಿಟೀಷರು ಒಂದೇ: ಟಿಪ್ಪು ಸುಲ್ತಾನ್‌ ಪಠ್ಯ ಕಡಿತಕ್ಕೆ ಕುಮಾರಸ್ವಾಮಿ ಆಕ್ರೋಶ

Webdunia
ಮಂಗಳವಾರ, 17 ಮೇ 2022 (14:51 IST)
ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ ವಿಷಯ ಕಡಿತ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದು, ಬಿಜೆಪಿಗರು ಮತ್ತು ಬ್ರಿಟಿಷರು ಇಬ್ಬರೂ ಒಂದೇ ಎಂದಿದ್ದಾರೆ.
ಮಂಗಳವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಪಠ್ಯಪುಸ್ತಕಗಳನ್ನು ʼಪಕ್ಷಪುಸ್ತಕʼಗಳನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರಕ್ಕೆ ನನ್ನ ಧಿಕ್ಕಾರವಿದೆ. ಬಿಜೆಪಿಯ ನೈಜ ಬಣ್ಣದ ವಿಸ್ತೃತರೂಪವೇ ಆಯ್ದ ಪಠ್ಯಗಳನ್ನು ಟಾರ್ಗೆಟ್‌ ಮಾಡಿ ಡಿಲೀಟ್‌ ಮಾಡುವುದು ಎಂದಿದ್ದಾರೆ.
ಬಿಜೆಪಿಯ ಈ ಬುಡಮೇಲು ಕೃತ್ಯಗಳ ಬಗ್ಗೆ ನನಗೆ ಅಚ್ಚರಿಯೇನೂ ಇಲ್ಲ. ನನ್ನ ಜತೆ ಮೈತ್ರಿ ಸರಕಾರ ಮಾಡಿದಾಗ ಅವರ ಬೇಳೆ ಬೇಯಲಿಲ್ಲ. ʼಆಪರೇಷನ್‌ ಕಮಲʼದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ʼಸ್ವಘೋಷಿತ ಡೋಂಗಿ ರಾಷ್ಟ್ರಭಕ್ತರುʼ ಇನ್ನೇನು ಮಾಡಲು ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.
ಮಹಾನ್‌ ರಾಷ್ಟ್ರಪ್ರೇಮಿ, ಬ್ರಿಟೀಷರಿಗೆ ಸಿಂಹಸ್ವಪ್ನ, ಭಾರತಮಾತೆಯ ಹೆಮ್ಮೆಯ ಪುತ್ರ ಸರ್ದಾರ್‌ ಭಗತ್‌ ಸಿಂಗ್‌ ಅವರ ಪಠ್ಯಕ್ಕೆ ಕೊಕ್‌ ಕೊಟ್ಟು, ಆರೆಸ್ಸೆಸ್‌ ಸಂಸ್ಥಾಪಕ ಹೆಡಗೇವಾರ್‌ ಕುರಿತ ಮಾಹಿತಿಯನ್ನು ಪಠ್ಯಕ್ಕೆ ತುರುಕುತ್ತಿರುವ ಬಿಜೆಪಿ ಮತ್ತವರ ಪಟಾಲಂ ವಿಕೃತಿಗೆ ಇದು ಪರಾಕಾಷ್ಠೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಗತ್‌ ಸಿಂಗ್‌ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಗಲ್ಲಿಗೇರಿದರು. ಸಂಘ ಪರಿವಾರಿಗಳು ಅದೇ ಬ್ರಿಟೀಷರಿಗೆ ಪರಿಚಾರಿಕೆ ಮಾಡಿಕೊಂಡು ಸ್ವಾತಂತ್ರ್ಯಕ್ಕಿಂತ ಗುಲಾಮಗಿರಿಯೇ ಲೇಸೆಂದುಕೊಂಡಿದ್ದರು. ಇಂಥವರು, ಭಗತ್‌ ಸಿಂಗ್‌ʼರಂಥ ರಾಷ್ಟ್ರಪ್ರೇಮಿಗಳನ್ನು ಸಹಿಸಿಕೊಳ್ಳುತ್ತಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನದಂತೆ ದುಬೈನಿಂದ ತೈಲವೂ ಕೂಡಾ ಕಳ್ಳಸಾಗಣೆ: ಪೊಲೀಸರಿಂದ ಬೃಹತ್ ಜಾಲ ಬಯಲು

ಗಗನಯಾತ್ರಿ ಸುನಿತಾ ವಿಲಿಯಮ್ಸ್ ನಿವೃತ್ತಿ: ಅವರ ಸಾಧನೆಗಳೇನು

ಅಧಿಕಾರ ಹಂಚಿಕೆ ಬಗ್ಗೆ ಬೆಂಬಲಿಗರ ಜೊತೆ ಸಭೆ: ಡಿಕೆ ಶಿವಕುಮಾರ್ ದಿಡೀರ್ ಯು ಟರ್ನ್

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ನಕಲಿ ಎಂದು ಸಾಬೀತಾದ್ರೆ ಏನಾಗಲಿದೆ

Karnataka Weather: ಕರ್ನಾಟಕ ಹವಾಮಾನ ವರದಿ, ಇಂದಿನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments