Publish Date: Fri, 08 Nov 2024 (16:15 IST)
Updated Date: Fri, 08 Nov 2024 (16:22 IST)
ಸಂಡೂರು: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಯುಕ್ತ ಇಂದು ಬೊಮ್ಮಘಟ್ಟದಲ್ಲಿ ನಡೆದ ಭರ್ಜರಿ ಪ್ರಚಾರ ಸಭೆ ಯಶಸ್ವಿಯಾಗಿ ನೆರವೇರಿತು. ಸಿಎಂ ಬಂದು ಹೋದ ಬೆನ್ನಲ್ಲೇ ಬಿಜೆಪಿ ಕೂಡಾ ಇಂದು ಭರ್ಜರಿ ಪ್ರಚಾರ ನಡೆಸಿದೆ.
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಜನಾರ್ಧನ ರೆಡ್ಡಿ, ಶ್ರೀರಾಮುಲು ಸೇರಿದಂತೆ ಬಿಜೆಪಿಯ ಘಟಾನುಘಟಿ ನಾಯಕರು ಇಂದು ತೆರೆದ ವಾಹನದಲ್ಲಿ ಪ್ರಚಾರ ನಡೆಸಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
4 ಬಾರಿ ಶಾಸಕರಾಗಿ ಒಂದು ಬಾರಿ ಸಂಸದರಾದ ತುಕಾರಾಮ್ ಅವರಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಎನ್ನುವುದು ಕನಸಿನ ಮಾತಾಗಿದ್ದು, ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ಮತ್ತು ಜನತೆಯ ಮನೆ ಮನೆಗೆ ಮೂಲಭೂತ ಸೌಕರ್ಯಗಳನ್ನು ಕೊಂಡೊಯ್ಯಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಮುನ್ನ ಸಿಎಂ ಸಿದ್ದರಾಮಯ್ಯ ಪ್ರಚಾರ ಭಾಷಣ ಮಾಡಿದ್ದರು. ಈ ವೇಳೆ ರೆಡ್ಡಿ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದರು. ರೆಡ್ಡಿ ಮತ್ತು ಪಟಾಲಂ ಈ ಹಿಂದೆ ಬಳ್ಳಾರಿಯನ್ನು ತಮ್ಮದೇ ಅಡ್ಡಾ ಮಾಡಿಕೊಂಡಿದ್ದರು. ಇನ್ನು ಮುಂದೆ ಅವರು ಇಲ್ಲಿ ತಲೆ ಎತ್ತದಂತೆ ಮಾಡಬೇಕು ಎಂದಿದ್ದರು.